ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ತಾಲೂಕು ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸಿದರು. ಲೋಕಸಭೆಯ ವಿಪಕ್ಷ ನಾಯಕನ ಸ್ಥಾನದಿಂದ ರಾಹುಲ್​ ಗಾಂಧಿಯನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು. ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ಕಾರ್ಯಕರ್ತರು ದೇಶದ ವಿರುದ್ಧ ಹೋರಾಟ ಮಾಡಬೇಕಾದ ಕಾಲಘಟ್ಟದಲ್ಲಿದ್ದೇವೆ ಎನ್ನುವಂತಿದ್ದರೆ ಭಾರತ ಬಿಟ್ಟು ಇಟಲಿಗೆ ಹೋಗಿ ಎಂದು ಆಕ್ರೋಶ ಹೊರಹಾಕಿದರು.

Edited By : PublicNext Desk
PublicNext

PublicNext

18/01/2025 03:22 pm

Cinque Terre

21.43 K

Cinque Terre

0

ಸಂಬಂಧಿತ ಸುದ್ದಿ