", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/396405_1737198410_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ರಾಜೀನಾಮಗೆ ಆಗ್ರಹಿಸಿ ಭಾರತ...Read more" } ", "keywords": "Node,Chamarajnagar,Public-News", "url": "https://publicnext.com/node" }
ಚಾಮರಾಜನಗರ : ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ರಾಜೀನಾಮಗೆ ಆಗ್ರಹಿಸಿ ಭಾರತೀಯ ಬೌದ್ಧ ಮಹಾಸಭಾ ಮಹಿಳಾ ವಿಭಾಗ ಹಾಗೂ ವಿವಿಧ ಮಹಿಳಾ ಸಂಘಟನೆಗಳ ಕಾರ್ಯಕರ್ತೆಯರು ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇಗುಲದ ಎದುರು ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ ವಿವಿಧ ಮಹಿಳಾ ಸಂಘಟನೆಗಳ ಕಾರ್ಯಕರ್ತೆಯರು ಕೇಂದ್ರ ಸರ್ಕಾರ ಹಾಗೂ ಗೃಹಸಚಿವ ಅಮಿತ್ ಶಾ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು. ಬಳಿಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯೊಂದಿಗೆ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ-209 ಹಾದು ಹೋಗಿರುವ ಶ್ರೀ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ, ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು, ಕೆಲಕಾಲ ಮಾನವ ಸರಪಳಿ ರಚಿಸಿ, ಅಮಿತ್ ಶಾ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಬಳಿಕ ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಸಾಗಿ ಜಿಲ್ಲಾಡಳಿತ ಭವನ ತಲುಪಿ, ಅಲ್ಲಿಯೂ ಕೆಲಕಾಲ ಪ್ರತಿಭಟನೆ ನಡೆಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದೊಂದು ಫ್ಯಾಷನ್ ಆಗಿದೆ. ಇದರ ಬದಲು ಇಷ್ಟು ಬಾರಿ ಭಗವಂತನನ್ನು ಸ್ಮರಣೆಮಾಡಿದ್ದರೆ ಏಳು ಜನ್ಮ ಇರುವವರೆಗೆ ಸ್ವರ್ಗವಾದರೂ ದೊರೆಯುತಿತ್ತು ಎಂದು ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇವರನ್ನು ಸ್ಮರಿಸಿ ಎಂದು ಹೇಳುತ್ತಾರೆ.
ಆದರೆ ನಮಗೆ ಅಂಬೇಡ್ಕರ್ ಅವರೇ ದೇವರು. ಸಂವಿಧಾನವೇ ನಮಗೆ ಗ್ರಂಥವಾಗಿದೆ. ಅದಕ್ಕಾಗಿ ನಾವು ಅಂಬೇಡ್ಕರ್, ಅಂಬೇಡ್ಕರ್ ಎಂದು ಸ್ಮರಿಸುತ್ತೇವೆ. ಹೀಗಾಗಿ ಸಂವಿಧಾನವನ್ನು ನಂಬಿ ಬದುಕುತ್ತಿರುವ ದೇಶದ ಜನರಿಗೆ ಅವಮಾನ ಮಾಡಿರುವ ಅಮಿತ್ ಶಾ ಅವರು ಕೂಡಲೇ ದೇಶದ ಜನರ ಕ್ಷಮೆ ಕೋರಬೇಕು. ಪ್ರಧಾನಿ ನರೇಂದ್ರಮೋದಿ ಅವರು ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.
ಅಮಿತ್ ಶಾ ವಿರುದ್ಧ ದೇಶಾದ್ಯಂತ ಬಾರಿ ಸಂಖ್ಯೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿಯವರು ಇಲ್ಲಿಯವರೆಗೂ ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಅಲ್ಲದೆ ನರೇಂದ್ರ ಮೋದಿ ಹಾಗೂ ಬಿಜೆಪಿ ಪಕ್ಷದವರು ಅಮಿತ್ ಶಾ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ಖಂಡನೀಯ. ಅಮಿತ್ ಶಾ ಅವರು ಕೂಡಲೇ ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದೇಶಾದ್ಯಂತ ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದರು.
PublicNext
18/01/2025 04:36 pm