ಚಿಕ್ಕಮಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಭಾರತದ ವಿರುದ್ಧ ನಮ್ಮ ಹೋರಾಟ ಎಂಬ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ವಿರೋಧ ಪಕ್ಷದ ನಾಯಕರು ತಮ್ಮ ಸ್ಥಾನದ ಜವಾಬ್ದಾರಿಯನ್ನು ಅರಿತಿರಬೇಕು, ಲೋಕಸಭೆ ವಿಪಕ್ಷ ನಾಯಕರು ಸಿಬಿಐ ಮುಖ್ಯಸ್ಥರು, ಸುಪ್ರೀಂ ಕೋರ್ಟ್ ಜಡ್ಜ್, ಸೇರಿದಂತೆ ಸಾಂವಿಧಾನಿಕ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಪ್ರಮುಖ ಜವಾಬ್ದಾರಿಯನ್ನು ಹೊಂದಿರುತ್ತಾರೆ.
ವಿಪಕ್ಷ ನಾಯಕರನ್ನು ಶಾಡೋ ಆಫ್ ಪಿಎಂ ಎನ್ನುತ್ತಾರೆ ಆದರೆ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಗಮನಿಸಿದರೆ ನಕ್ಸಲರ ಭಯೋತ್ಪಾದಕರ ನೆರಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದೆ ಎನ್ನುವುದಾದರೆ ಎಂದು ರಾಹುಲ್ ಗಾಂಧಿಯನ್ನು ವಿಪಕ್ಷ ನಾಯಕನ ಸ್ಥಾನದಿಂದ ಕೆಳಗಿಳಿಸಬೇಕೆಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಅಸಮಾಧಾನ ಹೊರಹಾಕಿದ್ದಾರೆ.
PublicNext
18/01/2025 05:49 pm