ಮೈಸೂರು : ಮಾಜಿ ಸಂಸದ ಪ್ರತಾಪ ಸಿಂಹ ಉಚ್ಚಾಟನೆಗೆ ಕಾರ್ಯಕರ್ತರು ಮನವಿ ಕೊಟ್ಟ ವಿಚಾರವಾಗಿ ಮೈಸೂರಿನಲ್ಲಿ ಸಂಸದ ಯದುವೀರ್ ಪ್ರತಿಕ್ರಿಯೆ ನೀಡಿದ್ದಾರೆ.
ಮಾಜಿ ಸಂಸದರ ನಡವಳಿಕೆಗಳು ಕಾರ್ಯಕರ್ತರಿಗೆ ಬೇಸರ ತರಿಸಿರಬಹುದು. ಕಳೆದ ಮೂರು ತಿಂಗಳಿನಲ್ಲಿ ಪ್ರತಾಪ ಸಿಂಹ ನೀಡಿರುವ ಹೇಳಿಕೆಗಳು ಮತ್ತು ನಡೆದಿರುವ ಘಟನೆಗಳಿಂದ ಕಾರ್ಯಕರ್ತರು ಬೇಸರಗೊಂಡಿದ್ದಾರೆ.
ಹೀಗಾಗಿ ಉಚ್ಚಾಟನೆಗೆ ಮನವಿ ಕೊಟ್ಟಿದ್ದಾರೆ. ಪತ್ರದ ಬಗ್ಗೆ ಪಕ್ಷರ ವರಿಷ್ಟರು ತೀರ್ಮಾನ ಮಾಡಲಿದ್ದಾರೆ. ವೈಯಕ್ತಿಕವಾಗಿ ನನಗೆ ಯಾರು ಪಕ್ಷ ಬಿಟ್ಟು ಹೋಗುವುದು ಇಷ್ಟ ಇಲ್ಲ. ವಿರೋಧ ಪಕ್ಷದ ಸ್ಥಾನದಲ್ಲಿರುವ ನಾವು ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಿದೆ. ನಮ್ಮ ನಮ್ಮಲೇ ಗೊಂದಲಗಳು ವಿರೋಧ ಆಬಾಸಗಳು ನಡೆಯಬಾರದು. ಎಲ್ಲವನ್ನೂ ತಿದ್ದಿಕೊಂಡು ಒಟ್ಟಾಗಿ ಸಾಗುವ ಕಾಲ ಇದು ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಹೇಳಿದ್ದಾರೆ.
PublicNext
18/01/2025 05:53 pm