", "articleSection": "Law and Order", "image": { "@type": "ImageObject", "url": "https://prod.cdn.publicnext.com/s3fs-public/52563-1737207472-b32a041a-5d36-473e-ab37-32340d0defb4.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದೇಶದಾದ್ಯಂತ ಸುದ್ದಿಯಾಗಿದ್ದ ಕೊಲ್ಕತ್ತಾದ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ಆಗಸ್ಟ್ 9, 2024 ರಂದು ಟ್ರೇನಿ ವೈದ್ಯಳ ಮೇಲೆ ನಡೆದಿದ್ದ ಅತ್ಯಾಚಾರ ...Read more" } ", "keywords": "The Kolkata court has delivered a significant verdict in the RG Kar hospital doctor case, finding the main accused, Sanjay Roy, guilty of rape and murder ¹ ² ³. This case has been a highly publicized and sensitive issue, with widespread protests and demands for justice. The court's decision is a crucial step towards ensuring that those responsible for the heinous crime are held accountable.,,Law-and-Order", "url": "https://publicnext.com/node" }
ದೇಶದಾದ್ಯಂತ ಸುದ್ದಿಯಾಗಿದ್ದ ಕೊಲ್ಕತ್ತಾದ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ಆಗಸ್ಟ್ 9, 2024 ರಂದು ಟ್ರೇನಿ ವೈದ್ಯಳ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ನನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.
ಕೊಲ್ಕತ್ತಾದ ಸೇಷನ್ ಕೋರ್ಟ್ ಸಂಜಯ್ ರಾಯ್ನನ್ನು ದೋಷಿ ಎಂದು ಘೋಷಿಸಿದೆ. ಒಟ್ಟು 50 ಸಾಕ್ಷಿಗಳನ್ನು ಪರಿಶೀಲಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸೇಷನ್ ನ್ಯಾಯಾಧೀಶ ಅನಿರ್ಬನ್ ದಾಸ್ ಈ ತೀರ್ಪನ್ನು ಪ್ರಕಟಿಸಿದ್ದು ಶಿಕ್ಷೆಯ ಪ್ರಮಾಣವನ್ನು ಜನವರಿ 20 ಸೋಮವಾರಕ್ಕೆ ಕಾಯ್ದಿರಿಸಿದೆ.
ಆರಂಭದಲ್ಲಿ ತನಿಖೆಯನ್ನು ಕೋಲ್ಕತ್ತಾ ಪೊಲೀಸರು ನಡೆಸಿದ್ದರು. ಆದರೆ ಕೊಲ್ಕತ್ತಾ ಹೈಕೋರ್ಟ್‌ನ ಹಸ್ತಕ್ಷೇಪದ ನಂತರ, ಈ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಗೆ ವರ್ಗಾಯಿಸಲಾಯಿತು. ಸಿಬಿಐ ತನಿಖೆಯನ್ನು ಪೂರ್ಣಗೊಳಿಸಿ 45 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿತು. ಅಪರಾಧಿಯಾಗಿ ಸಂಜಯ್ ರಾಯ್ ಪಾತ್ರವನ್ನು ಗಟ್ಟಿಗೊಳಿಸಲು 11 ಪ್ರಮುಖ ಪುರಾವೆಗಳನ್ನು ಮಂಡಿಸುವ ಮೂಲಕ ಸಿಬಿಐ ಆತನಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದೆ.
PublicNext
18/01/2025 07:08 pm