ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಕುವೆಂಪು ಅವರ ಸಾಹಿತ್ಯದ ಪರಿಕಲ್ಪನೆಯನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಿ- ಡಿಸಿ‌ಡಾ. ಎಂ.ಆರ್. ರವಿ

ಕೋಲಾರ : ಇಡೀ ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯದ ಪರಿಕಲ್ಪನೆಗಳನ್ನು ಎಲ್ಲರ ಜೀವನದಲ್ಲೂ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳಾದ ಡಾ. ಎಂ ಆರ್ ರವಿ ಅವರು ಹೇಳಿದರು. ನಗರದ ಸುವರ್ಣ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವಮಾನವ ಕುವೆಂಪು ಅವರ ಜನ್ಮದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಾಹಿತ್ಯಕ್ಕೆ ಅತ್ಯಂತ ಶ್ರೀಮಂತ ಹಾಗೂ ಒಂದು ದೊಡ್ಡ ಪರಂಪರೆಗೆ ಕುವೆಂಪು ರವರು ಅಗ್ರಗಣ್ಯ ಸ್ಥಾನದಲ್ಲಿದ್ದಾರೆ ಎಂದರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ನೋಡುವುದನ್ನು ಬಿಟ್ಟು ಸಾಹಿತ್ಯ, ಕಥೆ, ನಾಟಕ, ಕಾದಂಬರಿಗಳನ್ನು ಓದಬೇಕು,

ಪುಸ್ತಕಗಳ ಜೊತೆಗೆ ಅವಿನಭಾವ ಸಂಬಂಧವನ್ನು ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

Edited By : PublicNext Desk
Kshetra Samachara

Kshetra Samachara

18/01/2025 07:15 pm

Cinque Terre

400

Cinque Terre

0

ಸಂಬಂಧಿತ ಸುದ್ದಿ