ಹೊನ್ನಾವರ : ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ಹಿರಿಯ ನಟಿ ಉಮಾಶ್ರಿ ಇದೇ ಮೊದಲ ಬಾರಿಗೆ ಯಕ್ಷಗಾನದಲ್ಲಿ ಮಂಥರೆಯಾಗಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಹೌದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶುಕ್ರವಾರ (ಜ 17) ರಾತ್ರಿ ಶ್ರೀರಾಮ ಪಟ್ಟಾಭಿಷೇಕ ಯಕ್ಷಗಾನದಲ್ಲಿ ಮಂಥರೆ ಪಾತ್ರದಲ್ಲಿ ಅಭಿನಯಿಸಿದರು.
ಯಕ್ಷಗಾನ ರಂಗದಲ್ಲಿ ಹಾಸ್ಯಗಾರರು ನಿರ್ವಹಿಸುವ ಸವಾಲಿನ ಪಾತ್ರಗಳಲ್ಲಿ ಒಂದು ಎಂದೇ ಪರಿಗಣಿಸಲ್ಪಟ್ಟ ಮಂಥರೆಯ ವೇಷದೊಂದಿಗೆ ಮೊದಲ ಬಾರಿಗೆ ಯಕ್ಷರಂಗಭೂಮಿಯಲ್ಲಿ ಉಮಾಶ್ರೀಯವರು ಮಿಂಚಿದ್ದಾರೆ. ಹೊನ್ನಾವರದ ಸೇಂಟ್ ಅಂಥೋನಿ ಮೈದಾನದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಆಯೋಜಿಸಿರುವ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗದಲ್ಲಿ ನಡೆಯಿತು.
ಪೆರ್ಡೂರು ಮೇಳದ ಪ್ರಧಾನ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರ ಪದ್ಯಕ್ಕೆ ಹೆಜ್ಜೆ ಹಾಕುತ್ತಾ ತನ್ನ ಅಭಿನಯದ ಚಾಕಚಕ್ಯತೆಯನ್ನು ತೋರುತ್ತಾ ರಂಗಸ್ಥಳವೇರಿದ ನಟಿಗೆ ಕೂತೂಹಲಿಗರಾಗಿ ಕಾಯುತ್ತಿದ್ದ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಕೈಕೇಯಿ ಪಾತ್ರದಲ್ಲಿ ಖ್ಯಾತ ಸ್ತ್ರೀ ಪಾತ್ರಧಾರಿ ಯಲಗುಪ್ಪ ಸುಬ್ರಮಣ್ಯ ಹೆಗಡೆ ಉಮಾಶ್ರೀಯವರೊಂದಿಗೆ ಸಂಭಾಷಣೆಯಲ್ಲಿ ಗಮನ ಸೆಳೆದರು.
PublicNext
18/01/2025 08:21 pm