", "articleSection": "Business,Science and Technology,Government", "image": { "@type": "ImageObject", "url": "https://prod.cdn.publicnext.com/s3fs-public/229640-1737211887-srs.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಸಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ...Read more" } ", "keywords": "India, development, emerging countries, competition, AC Kavayaranani, Shirasi, Karnataka news, Indian economy, economic growth, global competition, nation development.,Uttara-Kannada,Business,Science-and-Technology,Government", "url": "https://publicnext.com/node" } ಶಿರಸಿ: ಭಾರತ ಅಭಿವೃದ್ಧಿ ಹೊಂದಿದ ದೇಶಗಳಿಗೆ ಪೈಪೋಟಿ ನೀಡುತ್ತಿದೆ - ಎಸಿ ಕಾವ್ಯಾರಾಣಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ಭಾರತ ಅಭಿವೃದ್ಧಿ ಹೊಂದಿದ ದೇಶಗಳಿಗೆ ಪೈಪೋಟಿ ನೀಡುತ್ತಿದೆ - ಎಸಿ ಕಾವ್ಯಾರಾಣಿ

ಶಿರಸಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ‌ ಸಹಯೋಗದಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು, (RAMP) ಯೋಜನೆಯಡಿಯಲ್ಲಿ ಲೀನ್ ಯೋಜನೆ ಮತ್ತು ಝಡ್.ಇ.ಡಿ. ಹಾಗೂ ರಫ್ತು ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಗರದ ಸುಪ್ರಿಯಾ ಇಂಟರ್ ನ್ಯಾಶನಲ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಎಸಿ ಕಾವ್ಯಾ ರಾಣಿಯವರು ಶನಿವಾರ ಈ ಒಂದು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಮಾತನಾಡಿ ರಾಜ್ಯಾದ್ಯಂತ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ‌ ನೀಡಲು ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದರು. ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಬಿ.ಲೋಕೇಶ್ ಹೆಗಡೆ ಮಾತನಾಡಿ ಇಲ್ಲಿರುವಂತ ಸಣ್ಣ ಸಣ್ಣ ಕೈಗಾರಿಕೆಗಳನ್ನು ಮಾಡುವುದಕ್ಕೆ ಸರಕಾರ ಉತ್ತೇಜನ ನೀಡಬೇಕೆಂದು ಹೇಳಿದರು.

ಉತ್ತರ ಕನ್ನಡ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಅಣ್ಣಪ್ಪ ಕೆ.ನಾಯ್ಕ ಮಾತನಾಡಿ, ಜಿಲ್ಲಾ ಕೈಗಾರಿಕಾ ಸಂಘ ಸ್ಥಾಪಿಸಿ 51 ವರ್ಷಗಳನ್ನು ಪೂರೈಸಿದೆ. ಸದ್ಯ ಶಿರಸಿಯು ಎಲ್ಲದರಲ್ಲಿಯೂ ‌ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ. ಆದರೆ ಕೈಗಾರಿಕೆಯಲ್ಲಿ ನಾವು ಯಾವುದೇ ಅಭಿವೃದ್ಧಿಯನ್ನು ಕಂಡಿಲ್ಲ , ಕೋವಿಡ್ ವೇಳೆಯಲ್ಲಿ ನಾವು ಕಾರ್ಮಿಕರಿಗೆ ಸಂಬಳ‌ ನೀಡಿದ್ದೇವೆ. ಕೇವಲ ಕಟ್ಟಡ ಕಟ್ಟುವ ಕಾರ್ಮಿಕರನ್ನು ಕಾರ್ಮಿಕರು ಎಂದು ಹೇಳಲಾಗುತ್ತದೆ. ಆದರೆ ಇನ್ನು ‌ಮುಂದೆ ಇಂಡಸ್ಟ್ರಿ ಯಲ್ಲಿ ದುಡಿಯುವ ಕಾರ್ಮಿಕರನ್ನು ಕಾರ್ಮಿಕರು ಎಂದು ಪರಿಗಣಿಸಬೇಕು ಎಂದರು.

Edited By : Manjunath H D
PublicNext

PublicNext

18/01/2025 08:21 pm

Cinque Terre

28.98 K

Cinque Terre

0

ಸಂಬಂಧಿತ ಸುದ್ದಿ