ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಸರಣಿ ಅಪಘಾತ, ಅದೃಷ್ಟವಶಾತ್ ಚಾಲಕರು ಬಚಾವ್

ಚಿತ್ರದುರ್ಗ: ಕ್ಯಾದ್ದಿಗ್ಗೆರೆ ಬಳಿ ಲಾರಿ, ಆಂಬುಲೆನ್ಸ್ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತ ನಡೆದ ಘಟನೆ ನಡೆದಿದೆ. ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4 ರ ಕ್ಯಾದ್ದಿಗೆರೆ ಗ್ರಾಮದ ಬಳಿ ಘಟನೆ ನಡೆದಿದ್ದು ಅದೃಷ್ಟವಶಾತ್ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು ಕಡೆ ಹೋಗುತ್ತಿದ್ದ ಕಂಟೇನರ್ ಲಾರಿಯೊಂದು ಕ್ಯಾದ್ದಿಗೆರೆ ಬಳಿ ಡೀಸೆಲ್‌ ಖಾಲಿಯಾಗಿ ನಿಂತಿದೆ. ಈ ವೇಳೆ ಯಾದಗಿರಿಯಿಂದ ರೋಗಿಯನ್ನ ಇಳಿಸಿ ವಾಪಾಸ್ ಬೆಂಗಳೂರಿಗೆ ಹೋಗುತ್ತಿದ್ದ ಆಂಬುಲೆನ್ಸ್ ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ಇದೇ ವೇಳೆ ಹಿಂದಿನಿಂದ ಬಂದ ಟಾಟಾ ಏಸ್ ಕೂಡ ಈ ಆಂಬುಲೆನ್ಸ್ ಗೆ ಡಿಕ್ಕಿ ಹೊಡೆದು ಟಾಟಾ ಏಸ್ ಹಾಗೂ ಆಂಬುಲೆನ್ಸ್ ಎರಡು ವಾಹನಗಳು ಜಖಂ ಗೊಂಡಿದ್ದು ಕೆಲ ಹೊತ್ತು ಇತರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು ಸ್ಥಳಕ್ಕೆ ಪೊಲೀಸರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದ ರಭಸಕ್ಕೆ ಆಂಬುಲೆನ್ಸ್ ಹಾಗೂ ಟಾಟಾ ಏಸ್ ವಾಹನಗಳು ಜಖಂಗೊಂಡಿದ್ದು ಅದೃಷ್ಟವಶಾತ್ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Vinayak Patil
PublicNext

PublicNext

18/01/2025 08:46 pm

Cinque Terre

12.43 K

Cinque Terre

0

ಸಂಬಂಧಿತ ಸುದ್ದಿ