ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ: ಕಾಫಿ ಕೊಯ್ಲು ಮಾಡುತ್ತಿದ್ದ ವೃದ್ಧನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…!

ಸಕಲೇಶಪುರ : ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದ ಪರಿಣಾಮ ವೃದ್ಧರೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಹೊಂಗಡಹಳ್ಳ ಬಳಿ ನಡೆದಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೀರೇಶ್ (62) ಎಂಬ ವ್ಯಕ್ತಿಯನ್ನು ಕಾಲಿನಿಂದ ತುಳಿದು ಸೊಂಡಿಲಿನಿಂದ ಎತ್ತಿ ಬಿಸಾಡಿದೆ.

ವೀರೇಶ್ ಅವರು ತಮ್ಮ ತೋಟದಲ್ಲಿ ಕಾಫಿ ಕೊಯ್ಲು ಮಾಡುತ್ತಿದ್ದರು. ಈ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಅಮಾಯಕನ ಮೇಲೆ ಆಕ್ರೋಶ ತೋರಿದೆ. ಪರಿಣಾಮ ವೀರೇಶ್ ಅವರ ಪಕ್ಕೆಲುಬು, ಸೊಂಟದ ಮೂಳೆ ಮುರಿದಿದೆ. ಕೂಡಲೇ ವೀರೇಶ್ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ಕರೆತರಲಾಗಿದ್ದು, ಐಸಿಯೂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ತಿಳಿದು ಆಸ್ಪತ್ರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಕಾಡಾನೆಗಳಿವೆ ಎಂದು ಮೊದಲೇ ಮಾಹಿತಿ ನೀಡಿದ್ದರೆ ವೀರೇಶ್ ಅವರು ತೋಟಕ್ಕೆ ಹೋಗುತ್ತಿರಲಿಲ್ಲ. ಆದರೆ ಯಾವುದೇ ಮಾಹಿತಿ ನೀಡದ ಹಿನ್ನೆಲೆ ಕೆಲಸಕ್ಕೆ ಹೋಗಿದ್ದರಿಂದ ಈ ಅನಾಹುತ ಸಂಭವಿಸಿದೆ ಎಂದು ತಮ್ಮ ಸಿಟ್ಟು ಹೊರ ಹಾಕಿದರು.

Edited By : Vinayak Patil
PublicNext

PublicNext

18/01/2025 09:52 pm

Cinque Terre

40.97 K

Cinque Terre

0

ಸಂಬಂಧಿತ ಸುದ್ದಿ