ವಡೋದರಾ: ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ 2024-25ರ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ವಿದರ್ಭವನ್ನು 36 ರನ್‌ಗಳಿಂದ ಸೋಲಿಸುವ ಮೂಲಕ ದಾಖಲೆಯ ಐದನೇ ಬಾರಿಗೆ ವಿಜಯ್ ಹಜಾರೆ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
ಟಾಸ್ ಗೆದ್ದ ವಿದರ್ಭ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಈ ಸಂದರ್ಭದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಕರ್ನಾಟಕ ತಂಡವು ಸ್ಮರಣ್ ರವಿಚಂದ್ರನ್ (101) ಅವರ ಭರ್ಜರಿ ಶತಕದ ನೆರವಿನಿಂದ 50 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 348 ರನ್ ಗಳಿಸಿತು.
ಇದೇ ವೇಳೆ ಸ್ಮರಣ್ ಅವರಿಗೆ ಸಾಥ್ ನೀಡಿದ ಕೃಷ್ಣನ್ ಶ್ರೀಜೀತ್ 78, ಹಾಗೂ ಅಭಿನವ್ ಮನೋಹರ್ 79 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.
PublicNext
18/01/2025 10:43 pm