", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/34454720250119024318filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ : ಮಹಾಯೋಗಿ ವೇಮನರು ವಚನಗಳ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿ ಸರಿ ದಾರಿಗೆ ಯತ್ನಿಸಿದವರು. ವೇಮನರ ವಚನಗಳು ಸಮಾಜಕ್ಕೆ ದಾರಿದೀಪವಾಗಿ...Read more" } ", "keywords": "Node,Chitradurga,News", "url": "https://publicnext.com/node" }
ಚಿತ್ರದುರ್ಗ : ಮಹಾಯೋಗಿ ವೇಮನರು ವಚನಗಳ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿ ಸರಿ ದಾರಿಗೆ ಯತ್ನಿಸಿದವರು. ವೇಮನರ ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಮಹಾಯೋಗಿ ವೇಮನ ಜಯಂತಿ ಆಚರಣೆ ಸಮಾರಂಭದಲ್ಲಿ ವೇಮನರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಜಯಂತಿ ಆಚರಣೆಗಳು ಜಾತಿಯ ಒಗ್ಗಟ್ಟು, ಜಾತಿಯ ಬಲ ಪ್ರದರ್ಶನವಲ್ಲ. ಮಹನೀಯರನ್ನು ಯಾವುದೇ ಜಾತಿಗೆ ಸೀಮಿತ ಮಾಡುವುದು ಸರಿಯಲ್ಲ. ಮಹನೀಯರ ಸಂದೇಶ, ಬದುಕು, ವಿಚಾರಧಾರೆಗಳು ಇಡೀ ಮಾನವ ಸಂಕುಲಕ್ಕೆ ಸಂಬಂಧಪಟ್ಟಿವೆ. ವೇಮನ ವಿಚಾರ ತಿಳಿದುಕೊಳ್ಳುವ ಮೂಲಕ ನಾವು ಮೌಲ್ಯಯುತ ಬದುಕು ರೂಢಿಸಿಕೊಳ್ಳಬೇಕು ಎಂದು ಹೇಳಿದರು..
Kshetra Samachara
19/01/2025 02:44 pm