ನವದೆಹಲಿ : ನಟ ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಇಂದು ಮುಂಜಾನೆ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಎಂದು ಗುರುತಿಸಲಾಗಿದೆ. ಈತನಿಗೆ 30 ವರ್ಷ ವಯಸ್ಸಾಗಿದ್ದು, ದರೋಡೆ ಮಾಡುವ ಉದ್ದೇಶದಿಂದ ನಟ ಸೈಫ್ ಅಲಿ ಖಾನ್ ಮನೆಗೆ ಪ್ರವೇಶಿಸಿದ್ದಾನೆ ಎಂದು ಡಿಸಿಪಿ ದೀಕ್ಷಿತ್ ಗೆದಮ್ ತಿಳಿಸಿದ್ದಾರೆ.
ಮೇಲ್ನೋಟಕ್ಕೆ ಆರೋಪಿ ಬಾಂಗ್ಲಾದೇಶಿಯಾಗಿದ್ದು, ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ನಂತರ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದಾನೆ ಎಂದು ಗೆದಮ್ ಹೇಳಿದ್ದಾರೆ. “ಆರೋಪಿ ವಿಜಯ್ ದಾಸ್ ಎಂಬುದಾಗಿ ಹೆಸರನ್ನು ಬಳಸುತ್ತಿದ್ದ. 5ರಿಂದ 6 ತಿಂಗಳ ಹಿಂದೆ ಮುಂಬೈಗೆ ಬಂದಿದ್ದ ಆರೋಪಿ ಕೆಲವು ದಿನಗಳ ಕಾಲ ಮುಂಬೈನಲ್ಲಿದ್ದ. ಹೌಸ್ ಕೀಪಿಂಗ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
“ಜನವರಿ 16ರಂದು ಮುಂಜಾನೆ 2 ಗಂಟೆ ಸುಮಾರಿಗೆ ನಟ ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿ ಅವರ ಮೇಲೆ ಹಲ್ಲೆ ನಡೆದಿತ್ತು. ಎಫ್ಐಆರ್ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಆತನ ಹೆಸರು ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್. ದರೋಡೆ ಮಾಡುವ ಉದ್ದೇಶದಿಂದ ಸೈಫ್ ಮನೆಗೆ ಪ್ರವೇಶಿಸಿದ್ದ. ಸದ್ಯ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ.
PublicNext
19/01/2025 03:43 pm