", "articleSection": "Politics,News,Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/399529_1737282363_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ಚಿತ್ರದುರ್ಗದ ಉಮಾಪತಿ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಟ್ಟದ ವಿಚಾರಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿಟಿಜನ್ಸ್ ಫಾರ್ ...Read more" } ", "keywords": "Node,Chitradurga,Politics,News,Public-News", "url": "https://publicnext.com/node" }
ಚಿತ್ರದುರ್ಗ: ಚಿತ್ರದುರ್ಗದ ಉಮಾಪತಿ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಟ್ಟದ ವಿಚಾರಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಕರ್ನಾಟಕ ಹಾಗೂ ದಿಕ್ಸೂಚಿ ಬಂಜಾರ ಕರ್ನಾಟಕ ಇವರ ವತಿಯಿಂದ ಬಾಬಾ ಸಾಹೇಬರ ಸಂವಿಧಾನ ಬದಲಾಯಿಸಿದ್ದು ಯಾರು? ಬಲಪಡಿಸಿದ್ದು ಯಾರು?ಎಂಬ ವಿಚಾರದ ಕುರಿತು ರಾಜ್ಯ ಮಟ್ಟದ ವಿಚಾರ ಗೋಷ್ಠಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮಾಜಿ ಸಚಿವ ಉಮೇಶ್ ಜಾದವ್ ಅವರು ಅಧ್ಯಕ್ಷತೆ ವಹಿಸಿದ್ದು ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಚಾರಗೋಷ್ಠಿ ನಡೆಸಿಕೊಟ್ಟರು.
ಹೂವಿನ ಹಡಗಲಿ ಶಾಸಕ ಕೃಷ್ಣ ನಾಯಕ್ ಅವರು ಉದ್ಘಾಟಕರ ಭಾಷಣ ಮಾಡಿದರು, ಶಾಸಕ ಕೃಷ್ಣ ನಾಯಕ್, ಸೇರಿದಂತೆ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ.
ಈ ವೇಳೆ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಅವರು ಮಾತನಾಡಿದ್ದು ನಮ್ಮ ಬಗ್ಗೆ ಟೀಕೆ ಮಾಡುವವರ ಬಗ್ಗೆ ನಾವು ಯೋಚನೆ ಮಾಡಬೇಕಿದೆ. ಸಂವಿಧಾನ ಅಪಾಯದಲ್ಲಿದೆ, ಮೋದಿಯವರು ಸಂವಿಧಾನ ಬದಲಾಯುಸುತ್ತಾರೆ ಎಂದು ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ನವರಿಗೆ ನಾನು ಪ್ರಶ್ನೆ ಮಾಡುತ್ತೇನೆ ಎಂದರು.
Kshetra Samachara
19/01/2025 03:56 pm