ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸೂಕ್ಷ್ಮತೆ ಇದ್ದ ಸಿಎಂ ಆಗಿದ್ದರೆ ಇಷ್ಟೊತ್ತಿಗೆ ರಾಜೀನಾಮೆ ಕೊಟ್ಟು ಹೋಗುತ್ತಿದ್ದರು: ಬೆಲ್ಲದ್

ಧಾರವಾಡ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಕುಟುಂಬ ಭಾಗಿಯಾಗಿದೆ ಎಂಬುದು ಇಡೀ ಜಗತ್ತಿಗೇ ಗೊತ್ತು. ಸೂಕ್ಷ್ಮತೆ ಇದ್ದ ಸಿಎಂ ಆಗಿದ್ದರೆ ಇಷ್ಟೊತ್ತಿಗೆ ರಾಜೀನಾಮೆ ಕೊಟ್ಟು ಹೋಗುತ್ತಿದ್ದರು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಭಂಡತನ ತೋರಿಸುತ್ತಿದ್ದಾರೆ. ರಾಜ್ಯಪಾಲರು ಮುಡಾ ಹಗರಣವನ್ನು ಪ್ರಾಸಿಕ್ಯೂಷನ್‌ಗೆ ಕೊಟ್ಟಾಗ ಸಿಎಂ ಬಂಧನ ಆಗುವವರೆಗೂ ಕಾಯಬಾರದು ಕೂಡಲೇ ರಾಜೀನಾಮೆ ಕೊಟ್ಟು ಕೆಳಗಿಳಿಯಬೇಕು ಎಂಬುದು ಜನರ ಅಪೇಕ್ಷೆಯಾಗಿತ್ತು. ಮುಡಾ ಪ್ರಕರಣವನ್ನು ಯಾವುದೇ ಕೈವಾಡ ಇಲ್ಲದೇ ತನಿಖೆ ಮಾಡಬೇಕು ಎಂದರೆ ಸಿಎಂ ಆ ಸ್ಥಾನದಲ್ಲಿ ಇರಬಾರದು ಎಂಬ ಒತ್ತಾಯ ಕೇಳಿ ಬಂದಿತ್ತು. ಆದರೆ, ಸಿಎಂ ಭಂಡತನ ತೋರುತ್ತಿದ್ದಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿದ ಬೆಲ್ಲದ, ರಾಜ್ಯಾಧ್ಯಕ್ಷರ ನೇಮಕವನ್ನು ಹೈಕಮಾಂಡ್ ನಿರ್ಧಾರ ಮಾಡಲಿದೆ. ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ನೋಡೋಣ. ಇದರ ಬಗ್ಗೆ ಮಾಧ್ಯಮದೆದುರು ಮಾತನಾಡುವುದಿಲ್ಲ ಎಂದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

19/01/2025 04:15 pm

Cinque Terre

36.11 K

Cinque Terre

8

ಸಂಬಂಧಿತ ಸುದ್ದಿ