ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಜಿಲ್ಲಾಡಳಿತದಿಂದ ಮಹಾಯೋಗಿ ಶ್ರೀ ವೇಮನ ಜಯಂತಿ ಆಚರಣೆ

ಕೋಲಾರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋಲಾರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಹಾಯೋಗಿ ಶ್ರೀ ವೇಮನ ಜಯಂತಿಯನ್ನು ಆಚರಣೆ ಮಾಡಲಾಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್, ವೇಮನರು ಶ್ರೇಷ್ಠ ವಚನಕಾರರು, ಚಿಂತಕರು ಮತ್ತು ಮಾನವ ಕುಲದ ಅಭಿವೃದ್ಧಿಗಾಗಿ ಶ್ರಮಿಸಿದವರಾಗಿದ್ದಾರೆ. ಅವರನ್ನು ರೆಡ್ಡಿ ಸಮಾಜಕ್ಕೆ ಸೀಮಿತಗೊಳಿಸಬಾರದು ಎಂದರು. ಸಮುದಾಯದವರ ಆಶಯದಂತೆ ರಾಜ್ಯದ ಮೊದಲ ಮುಖ್ಯಮಂತ್ರಿ, ಕೋಲಾರ ಜಿಲ್ಲೆಯವರೇ ಆದಂತಹ ಕೆ.ಸಿ.ರೆಡ್ಡಿರವರ ಪುತ್ಥಳಿಯನ್ನು ಕೋಲಾರ ಜಿಲ್ಲಾ ಕೇಂದ್ರದಲ್ಲಿ ‌ ಅನಾವರಣಗೊಳಿಸಲು ಮುಖಂಡರೊಂದಿಗೆ ಚರ್ಚೆ ನಡೆಸಿ, ಶೀಘ್ರವೇ ಕೆ.ಸಿ.ರೆಡ್ಡಿರವರ ಪುತ್ತಳಿ ಅನಾವರಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು, ಶಾಸಕ ಕೆ.ವೈ.ನಂಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು, ಎಂ.ಎಲ್. ಅನಿಲ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಸೇರಿದಂತೆ ರೆಡ್ಡಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

19/01/2025 07:11 pm

Cinque Terre

400

Cinque Terre

0

ಸಂಬಂಧಿತ ಸುದ್ದಿ