ನರಸಿಂಹರಾಜಪುರ : ವರ್ಷದ ಆರಂಭದಲ್ಲೇ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಜನರಲ್ಲಿ ಆತಂಕ ಸೃಷ್ಟಿಸಿದೆ. ಕಳೆದವಾರ 25 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ದೃಢಪಟ್ಟಿತ್ತು. ಸದ್ಯ ಸೋಂಕಿತ ಯುವಕನಿಗೆ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇದೀಗ ಎನ್.ಆರ್ ಪುರ ತಾಲೂಕಿನ ಮೇಲ್ಪಾಲ್ ಗ್ರಾಮದ 46 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ. ಮಂಗನ ಕಾಯಿಲೆ ದೃಢಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು ಜನರಲ್ಲಿ ತಿಳುವಳಿ ಮೂಡಿಸಲಾಗುತ್ತಿದೆ.
ರೋಗದ ಲಕ್ಷಣಗಳು
ಇದೊಂದು ಅಪರೂಪದ ಕಾಯಿಲೆಯಾಗಿದ್ದು, ಮಾನವರಿಂದ ಮಾನವರಿಗೆ ಹರಡುವುದಿಲ್ಲ ಬದಲಾಗಿ ಸೋಂಕಿತ ಮಂಗನ ರಕ್ತ ಹೀರುವ ಉಣ್ಣೆಗಳಿಂದ ಅಥವಾ ಮಂಗ ತಿಂದು ಬಿಟ್ಟ ಅಥವಾ ಸ್ಪರ್ಶಿಸಿದ ವಸ್ತುಗಳನ್ನು ಮುಟ್ಟಿದಾಗ ಈ ಕಾಯಿಲೆ ತಗುಲುವ ಸಂಭವವಿರುತ್ತದೆ. ಈ ರೋಗದ ಲಕ್ಷಣಗಳೆಂದರೆ ಜ್ವರ, ದೃಷ್ಟಿ ದೋಷ, ತಲೆನೋವು, ಮಾನಸಿಕ ಅಸಮತೋಲನ, ಮೈ ಕೈ ನೋವು, ವಾಂತಿ, ಅತಿಸಾರ ಮತ್ತು ಪ್ಲೆಟೇಟ್ ಸಂಖ್ಯೆಯಲ್ಲಿ ಇಳಿಕೆ ಮತ್ತು ಒಸಡಿನಲ್ಲಿನ ರಕ್ತಸ್ರಾವ ಉಂಟಾಗುವ ಸಾಧ್ಯತೆ ಇರಲಿದೆ.
PublicNext
19/01/2025 08:31 pm