ಚಿತ್ರದುರ್ಗ :ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್-ಬಿ ಹುದ್ದೆಗಳಿಗೆ ಭಾನುವಾರ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆಯಿತು.ನಗರದ 21 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಪತ್ರಿಕೆ-1 ಸಾಮಾನ್ಯ ಪತ್ರಿಕೆಗೆ ಜಿಲ್ಲೆಯಲ್ಲಿ ಒಟ್ಟು 7,783 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.ಈ ಪೈಕಿ 3,160 ಅಭ್ಯರ್ಥಿಗಳು ಹಾಜರಾಗಿದ್ದು, 4,623 ಗೈರಾಗಿದ್ದಾರೆ.
ಮೊಬೈಲ್ ಬ್ಲೂಟೂತ್ ಮತ್ತು ಇತರೆ ಆಧುನಿಕ ಸಂವಹನ ಉಪಕರಣಗಳನ್ನು ಬಳಸಿ ಪರೀಕ್ಷೆಯಲ್ಲಿ ಅಕ್ರಮಗಳನ್ನು ಎಸಗುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಸಲಾಗಿತ್ತು. ಪ್ರತಿ ಕೊಠಡಿಯಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ, ಫೇಸ್ ರೆಕಗ್ನೈಸೇಷನ್ ಹಾಗೂ ಬಯೋಮೆಟ್ರಿಕ್ ಹಾಜರಾತಿ ಹಾಕಲಾಯಿತು. ಅಭ್ಯರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ತಪಾಸಣೆಗೆ ಒಳಪಡಿಸಲಾಯಿತು.
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಕೇಂದ್ರದ ಸುತ್ತಲಿನ ಜೆರಾಕ್ಸ್, ಕಂಪ್ಯೂಟರ್ ಹಾಗೂ ಇಂಟರ್‌ನೆಟ್ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು.
Kshetra Samachara
19/01/2025 08:56 pm