", "articleSection": "Law and Order", "image": { "@type": "ImageObject", "url": "https://prod.cdn.publicnext.com/s3fs-public/41912020250119084128filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ವರದಕ್ಷಿಣೆ ಕಿರುಕುಳದ ಆರೋಪ ಎದುರಿಸುತ್ತಿದ್ದ ಕಳಸ ಪೊಲೀಸ್ ಠಾಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ನಿತ್ಯಾನಂದ ಗೌಡ ಮೇಲೆ ಪತ್ನ...Read more" } ", "keywords": "Node,Chikmagalur,Law-and-Order Kalasa, Police Officer Suspended, Domestic Violence, Dowry Harassment, Karnataka Police, Crime Against Women, Women's Safety, Police Accountability.,Law-and-Order", "url": "https://publicnext.com/node" }
ಚಿಕ್ಕಮಗಳೂರು: ವರದಕ್ಷಿಣೆ ಕಿರುಕುಳದ ಆರೋಪ ಎದುರಿಸುತ್ತಿದ್ದ ಕಳಸ ಪೊಲೀಸ್ ಠಾಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ನಿತ್ಯಾನಂದ ಗೌಡ ಮೇಲೆ ಪತ್ನಿ ಅಮಿತಾ ವರದಕ್ಷಿಣೆ ಕಿರುಕುಳ, ಮಾನಸಿಕ ಹಿಂಸೆ, ದೌರ್ಜನ್ಯ ನಡೆಸಿ, 50 ಲಕ್ಷ ವರದಕ್ಷಿಣೆ ನೀಡಬೇಕು, ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಅಮಿತಾ ಕಳಸ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಹಿಂದೆ ದೂರು ನೀಡಲು ಬಂದ ಹೆಣ್ಣು ಮಕ್ಕಳ ಜೊತೆಯಲ್ಲಿ ಅಸಭ್ಯವಾಗಿ ವರ್ತಿಸುವುದಲ್ಲದೇ, ಪಾಸ್‌ಪೋರ್ಟ್ ಮಾಡಲು ಬರುವ ಮಹಿಳೆಯರನ್ನು ಲೈಂಗಿಕ ಸಂಪರ್ಕಕ್ಕೆ ಕರೆಯುತ್ತಾನೆ ಎಂದೂ ಗಂಭೀರವಾಗಿ ಆರೋಪಿಸಲಾಗಿತ್ತು.
ಅಲ್ಲದೇ ಕಾಪು ಪೊಲೀಸ್ ಠಾಣೆಯಲ್ಲಿ ಮಹಿಳೆಯೊಂದಿಗೆ ಅನೈತಿಕ ಸಂಬಂಧ , ಕೋಟ, ಬ್ರಹ್ಮಾವರ ಠಾಣೆಯಲ್ಲಿ ಮಹಿಳೆಯರಿಗೆ ನ್ಯಾಯ ಕೊಡಿಸುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಕಳಸ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ನಿತ್ಯಾನಂದ ಗೌಡ ವಿರುದ್ಧ ದೂರು ದಾಖಲಾಗಿತ್ತು. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಿ ಮೇಲ್ನೋಟಕ್ಕೆ ಆರೋಪ ಸಾಬೀತು ಆಗಿರುವ ಹಿನ್ನೆಲೆಯಲ್ಲಿ ಇದೀಗ ಸಸ್ಪೆಂಡ್ ಮಾಡಲಾಗಿದೆ.
PublicNext
19/01/2025 09:01 pm