ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇರಳ: ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ಕೇರಳಿಗರಿಂದ ಹಲ್ಲೆ

ಹಾಸನ: ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳ ಮೇಲೆ ಕೇರಳಿಗರು ಹಲ್ಲೆ ಮಾಡಿರುವ ಘಟನೆ ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ತಿರುರಂಗಡಿ ತಾಲ್ಲೂಕಿನ ಪಾಣಂಬರ್ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದ ಮನು ಎಂಬುವರಿಗೆ ಗಾಯಗಳಾಗಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇರಳ ರಾಜ್ಯದ ಮಾರಿಯಮ್ಮ ಹಲ್ವಾ ಅಂಗಡಿಯ ಕೆಲಸದವರಿಂದ ಕನ್ನಡಿಗರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಘಟನೆಯ ಸಂಬಂಧ ಹಾಸನದ ಎಸ್ ಪಿ ಗೆ ಫೋನ್ ಮೂಲಕ ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಕೇರಳ ಪೊಲೀಸರೊಂದಿಗೆ ಚರ್ಚಿಸಿರುವ ಹಾಸನದ ಎಸ್ಪಿ ಮೊಹಮ್ಮದ್ ಸುಜಿತಾ,ಅಗತ್ಯ ಕ್ರಮ ಕೈಗೊಳ್ಳುವಂತೆ ಕೇರಳ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಮಾಹಿತಿ ಪಡೆದ ಕೇರಳ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Edited By : Vinayak Patil
PublicNext

PublicNext

19/01/2025 10:24 pm

Cinque Terre

22.97 K

Cinque Terre

0