", "articleSection": "Sports", "image": { "@type": "ImageObject", "url": "https://prod.cdn.publicnext.com/s3fs-public/387839-1737305933-WhatsApp-Image-2025-01-19-at-10.18.57-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ : ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಖೋ- ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮುಖಾಂತರ ಭಾರತದ ಮಹಿಳಾ - ಪುರುಷ ತ...Read more" } ", "keywords": "Kho Kho World Cup 2025: India emerge as inaugural champions in both men’s and women’s events ,,Sports", "url": "https://publicnext.com/node" }
ನವದೆಹಲಿ : ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಖೋ- ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮುಖಾಂತರ ಭಾರತದ ಮಹಿಳಾ - ಪುರುಷ ತಂಡಗಳು ಚಾಂಪಿಯನ್ ಪಟ್ಟ ಅಲಂಕರಿಸಿವೆ.
ಇಂದು ಮೊದಲಿಗೆ ನಡೆದ ಮಹಿಳೆಯರ ಫೈನಲ್ ಪಂದ್ಯದಲ್ಲಿ ನೇಪಾಳ ಮಹಿಳಾ ತಂಡವನ್ನು ಮಣಿಸಿದ್ದ ಭಾರತ ಮಹಿಳಾ ತಂಡ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಇದೀಗ ನಡೆದ ಪುರುಷರ ಫೈನಲ್ ಪಂದ್ಯದಲ್ಲಿ ಭಾರತದ ಪುರುಷರ ತಂಡ ನೇಪಾಳ ಪುರುಷರ ತಂಡವನ್ನು ಮಣಿಸಿ ಪ್ರಶಸ್ತಿ ಗೆದ್ದುಕೊಂಡಿದೆ.
ಪುರುಷರ ಖೋ-ಖೋ ವಿಶ್ವಕಪ್‌ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಿದ್ದವು. ಈ ಅವಧಿಯಲ್ಲಿ ಭಾರತದ ಪುರುಷರ ತಂಡ ನೇಪಾಳ, ಪೆರು, ಬ್ರೆಜಿಲ್ ಮತ್ತು ಭೂತಾನ್‌ನೊಂದಿಗೆ ಎ ಗುಂಪಿನಲ್ಲಿತ್ತು. ಗ್ರೂಪ್ ಹಂತದಲ್ಲಿ ಟೀಂ ಇಂಡಿಯಾ ಪ್ರತಿ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ಭಾರತ ತಂಡ ನೇಪಾಳವನ್ನು 42-37 ಅಂಕಗಳಿಂದ ಸೋಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಇದಾದ ಬಳಿಕ ಬ್ರೆಜಿಲ್ ತಂಡವನ್ನು 64-34 ಅಂಕಗಳಿಂದ ಸೋಲಿಸಿದ್ದರೆ, ಪೆರು ವಿರುದ್ಧ 70-38 ಅಂತರದ ಗೆಲುವು ಸಾಧಿಸಿತ್ತು. ಆ ಬಳಿಕ ಭೂತಾನ್ ತಂಡವನ್ನು 71-34ರಲ್ಲಿ ಮಣಿಸಿತ್ತು.
PublicNext
19/01/2025 10:29 pm