ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಸ್ ಹತ್ತಲು ಪ್ರಯಾಣಿಕರ ನೂಕುನುಗ್ಗಲು

ಹಿರಿಯೂರು: ಕೋವಿಡ್‌ ಸಂಕಷ್ಟದ ನಂತರ ಬಸ್ ಸಂಚಾರ ವ್ಯವಸ್ಥೆಯಲ್ಲಿ ತುಂಬಾ ವ್ಯತ್ಯಾಸಗಳಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಕೆಲವು ಖಾಸಗಿ ಬಸ್‌ ಸಂಚಾರವನ್ನು ಮಾಲೀಕರು ನಿಲ್ಲಿಸಿದ್ದಾರೆ. ಇನ್ನು ಶಕ್ತಿ ಯೋಜನೆ ಆರಂಭದ ಬಳಿಕ ಖಾಸಗಿ ಬಸ್ ಅವಲಂಬಿಸುವವರೇ ಇಲ್ಲದಂತಾಗಿದೆ.ಪರಿಣಾಮ ಸರ್ಕಾರಿ ಬಸ್‌ ಪ್ರಯಾಣ ಪ್ರಯಾಸವಾಗಿದೆ.

ಧರ್ಮಪುರದಿಂದ- ಶಿರಾ ಮಾರ್ಗವಾಗಿ ತುಮಕೂರು ಮತ್ತು ಬೆಂಗಳೂರಿನತ್ತ ಸಂಚರಿಸಲು ಸರ್ಕಾರಿ ಬಸ್‌ನಲ್ಲಿ ಸೀಟ್ ಸಿಗುವುದಿರಲಿ, ಒಳಗಡೆ ಕಾಲಿಡಲೂ ಆಗದ ಸ್ಥಿತಿ ಇದೆ.

ನಿತ್ಯ ಬೆಳಿಗ್ಗೆ 4.30ಕ್ಕೆ ಪರಶುರಾಂಪುರದಿಂದ ಧರ್ಮಪುರಕ್ಕೆ ಬರುವ ಬಸ್ ಒಮ್ಮೊಮ್ಮೆ ನಿಲ್ಲಿಸದೇ ಹೋಗುತ್ತಾರೆ. ಇದರಿಂದ ಬೆಳಿಗ್ಗೆ ನಾಲ್ಕು ಗಂಟೆಗೇ ಸುತ್ತಮುತ್ತಲಿನ ಹಳ್ಳಿಗಳಿಂದ ಬಂದು ಕಾಯುವ ಪ್ರಯಾಣಿಕರು ಹತಾಶೆಯಿಂದ ಊರಿಗೆ ಹಿಂತಿರುಗಬೇಕು. ನಂತರದ ಸಮಯದಲ್ಲಿ ಶಿರಾಕ್ಕೆ ಬಸ್ ಇದ್ದರೂ ವಿದ್ಯಾರ್ಥಿಗಳಿಂದ ತುಂಬಿಕೊಂಡು ನೇತಾಡುವ ದೃಶ್ಯ ಕಂಡುಬರುತ್ತದೆ' ಎಂದು ಪ್ರಯಾಣಿಕರು ತಿಳಿಸುತ್ತಾರೆ.

Edited By : PublicNext Desk
Kshetra Samachara

Kshetra Samachara

20/01/2025 08:54 am

Cinque Terre

5.06 K

Cinque Terre

0

ಸಂಬಂಧಿತ ಸುದ್ದಿ