ಹಿರಿಯೂರು:ವಿದ್ಯಾರ್ಥಿನಿಲಯಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ವಿದ್ಯಾರ್ಥಿಗಳಿಗೆ ಊಟ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅಧಿಕಾರಿಗಳಿಗೆ ಸೂಚಿಸಿದರು.ತಾಲ್ಲೂಕಿನ ವಾಣಿವಿಲಾಸಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು ಮಾತನಾಡಿದರು.ಶೌಚಾಲಯದಲ್ಲಿ ಸ್ವಚ್ಛತೆ ಕೊರತೆ ಹೊರತುಪಡಿಸಿದರೆ ಯಾವುದೇ ಸಮಸ್ಯೆ ಇಲ್ಲ. ಊಟ-ತಿಂಡಿ, ಶುದ್ಧ ಕುಡಿಯುವ ನೀರು, ಶಿಕ್ಷಕರ ಬೋಧನೆ, ಸುರಕ್ಷತೆ ಒಳಗೊಂಡು ಎಲ್ಲವೂ ಉತ್ತಮವಾಗಿದೆ ಎಂದು ವಿದ್ಯಾರ್ಥಿಗಳು ಉತ್ತರಿಸಿದರು.
Kshetra Samachara
20/01/2025 09:01 am