ಹಾಸನ:ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ 'ಕಾಂತಾರ -2' ಚಿತ್ರದ ಶೂಟಿಂಗ್ ವೇಳೆ ಅರಣ್ಯಕ್ಕೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಚಿತ್ರ ತಂಡದ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ .
ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ 'ಕಾಂತಾರ 2' ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಹಾನಿ ಮಾಡಿದ ಆರೋಪ ಕೇಳಿ ಬಂದಿದ್ದು
ಅರಣ್ಯದ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡಲಾಗುತ್ತಿದೆ ಎಂದು ದೂರಲಾಗಿದೆ.
ಹೊಸೂರು ಗ್ರಾಮ ಪಂಚಾಯಿತಿಯ ಹೆರೂರು ಗ್ರಾಮದಲ್ಲಿ ಚಿತ್ರೀಕರಣ ಸ್ಥಳದಲ್ಲಿ ಅರಣ್ಯಕ್ಕೆ ಹಾನಿ ಮಾಡಲಾಗಿದೆ. ಜನವರಿ 2ರಿಂದ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣಕ್ಕಾಗಿ ಗೋಮಾಳ ಜಾಗಕ್ಕೆ ಪರವಾನಿಗೆ ಪಡೆದಿರುವ ಚಿತ್ರತಂಡ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ನಾಶ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಚಿತ್ರತಂಡದ ನಡೆಯ ಬಗ್ಗೆ ಹೆರೂರು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಿತ್ರೀಕರಣಕ್ಕೆ ಯಾವೆಲ್ಲ ಪರವಾನಿಗೆ ನೀಡಿದ್ದಾರೆ ಎನ್ನುವ ಮಾಹಿತಿಯನ್ನು ಅರಣ್ಯ, ಕಂದಾಯ ಇಲಾಖೆಯವರು ಬಹಿರಂಗಪಡಿಸಬೇಕೆಂದು ಆಗ್ರಹಿಸಿದ್ದಾರೆ.
Kshetra Samachara
20/01/2025 11:56 am