ಕೆಜಿಎಫ್ : ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಕೆಜಿಎಫ್ ಪೊಲೀಸ್ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿ ಆತನಿಂದ 2. ಕೆಜಿ 615 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸನಹಳ್ಳಿ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಕುರಿತು ಖಚಿತ ಮಾಹಿತಿ ಮೇರೆಗೆ ಸೈಬರ್ ಕ್ರೈಂ ಅಪರಾಧ ಪೊಲೀಸ್ ಠಾಣೆ ಇನ್ ಸ್ ಪೆಕ್ಟರ್ ಲಕ್ಷ್ಮೀನಾರಾಯಣ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಕೋಲಾರ ತಾಲೂಕು ಸುಗಟೂರು ಗ್ರಾಮದ ನಿವಾಸಿ ರಾಹುಲ್ ಎಂಬಾತನನ್ನು ಬಂಧಿಸಿ ಆತನಿಂದ 2 ಲಕ್ಷ ರೂ ಮೌಲ್ಯದ 2.ಕೆಜಿ 615 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
PublicNext
20/01/2025 01:17 pm