", "articleSection": "Entertainment", "image": { "@type": "ImageObject", "url": "https://prod.cdn.publicnext.com/s3fs-public/418299-1737359595-BB.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ChaitanyaKothari" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬಿಗ್‌ಬಾಸ್ ಎನ್ನುವ ರಿಯಾಲಿಟಿ ಶೋ ಮೂಲಕ ಕಿಚ್ಚ ಮತ್ತಷ್ಟು ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಇದೀಗ ಕಿಚ್ಚ ಬಿಗ್‌ಬಾಸ್ ಜರ್ನಿ ನನ್ನ ಜೀವನದಲ...Read more" } ", "keywords": "Bigg Boss, Kichcha Sudeep, Reality TV Show, Celebrity Life, Karnataka Celebrity, Bigg Boss Journey, Sudeep Memories, TV Show Experience, Kannada Bigg Boss.,,Entertainment", "url": "https://publicnext.com/node" }
ಬಿಗ್‌ಬಾಸ್ ಎನ್ನುವ ರಿಯಾಲಿಟಿ ಶೋ ಮೂಲಕ ಕಿಚ್ಚ ಮತ್ತಷ್ಟು ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಇದೀಗ ಕಿಚ್ಚ ಬಿಗ್‌ಬಾಸ್ ಜರ್ನಿ ನನ್ನ ಜೀವನದಲ್ಲಿ ಮರೆಯಲಾಗದ ನೆನಪು ಎಂದು ಸುದೀಪ್ ಹೇಳಿದ್ದಾರೆ. ಮುಂದಿನ ಭಾನುವಾರ ಬಿಗ್‌ಬಾಸ್ 11 ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಸುದೀಪ್ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ 11 ಸೀಸನ್‌ಗಳಿಂದ ನಾನು ಬಿಗ್‌ಬಾಸ್ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ. ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ. ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ ಇದೀಗ ಅದೆಷ್ಷೋ ಬಿಗ್ ಬಾಸ್ ಪ್ರೇಮಿಗಳು ಬೇಸರ ವ್ಯಕ್ತ ಪಡಿಸಿ ಕಾಮೆಂಟ್ಸ್ ಮಾಡಿದ್ದಾರೆ.
PublicNext
20/01/2025 01:23 pm