ದೇಶದಾದ್ಯಂತ ಸುದ್ದಿಯಾಗಿದ್ದ ಕೊಲ್ಕತ್ತಾದ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ಆಗಸ್ಟ್ 9, 2024 ರಂದು ಟ್ರೇನಿ ವೈದ್ಯಳ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ ಗೆ ಕೊಲ್ಕತ್ತಾದ ಸೇಷನ್ ಕೋರ್ಟ್ ಜೀವಾವಧಿ ಶಿಕ್ಷೆ ಹಾಗೂ ಹಾಗೂ 50,000 ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.
ಕೊಲ್ಕತ್ತಾದ ಸೇಷನ್ ಕೋರ್ಟ್ ನ್ಯಾಯಾಧೀಶ ಅನಿರ್ಬನ್ ದಾಸ್ ಈ ತೀರ್ಪು ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯ ಕುಟುಂಬಕ್ಕೆ ರಾಜ್ಯ ಸರ್ಕಾರ 17 ಲಕ್ಷ ರೂ.ಪರಿಹಾರ ನೀಡಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ. ಈ ವೇಳೆ ಸೀಲ್ಡಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಈ ಘಟನೆ ಅತ್ಯಂತ ಅಪರೂಪವಲ್ಲ. ಆದರೆ ಈ ಘಟನೆ ಘೋರ ಘಟನೆಯಾಗಿದೆ. ಸಂಜಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದಿದ್ದಾರೆ.
PublicNext
20/01/2025 03:07 pm