ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಕಾರು - ಲಾರಿ ನಡುವೆ ಡಿಕ್ಕಿ, ಮೂವರು ದುರ್ಮರಣ

ಕಲಬುರಗಿ: ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲುಕಿನ ಮಗದಂಪುರ ಬಳಿ ನಡೆದಿದೆ.

ಬೀದರ್‌ನಿಂದ ತೆಲಂಗಾಣದ ಧಾರೂರ್‌ಗೆ ತೆರಳುತ್ತಿದ್ದ ಕಾರು ಹಾಗೂ ತೆಲಂಗಾಣದಿಂದ ಚಿಂಚೋಳಿ ಕಡೆಗೆ ಬರುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವಿನಾಶ್ (24), ಅಭಿಷೇಕ್ (26) ಹಾಗೂ ಸಂಜೀವ್ (40) ಮೃತರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Abhishek Kamoji
PublicNext

PublicNext

20/01/2025 03:39 pm

Cinque Terre

16.45 K

Cinque Terre

0