ಚಿತ್ರದುರ್ಗ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಎಸ್.ಸಿ.ಮಹೇಶ್ ಅವರು ಈಚೆಗೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಘನತ್ಯಾಜ್ಯ ನಿರ್ವಹಣೆ, ಬೂದು ನೀರು ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ, ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಚಳ್ಳಕೆರೆ ತಾಲ್ಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿ ಹಾಗೂ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯ ಘಟಕಾಂಶಗಳ ಪ್ರಗತಿ ಪರಿಶೀಲನೆ ನಡೆಸಿದರು.
ಮೊಳಕಾಲ್ಮುರು ತಾಲ್ಲೂಕಿನ ಕೆರೆಕೊಂಡಾಪುರ ಗ್ರಾಮದಲ್ಲಿ ಸ್ವಚ್ಛ ಸಂಕೀರ್ಣ ಘಟಕದಲ್ಲಿ ಘನ ತ್ಯಾಜ್ಯ ನಿರ್ವಹಣೆ ಹಾಗೂ ಕಾರ್ಯಚರಣೆ ಬಗ್ಗೆ ಪರಿಶೀಲಿಸಿದರು. ನಂತರ ಮಲ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಳ ಪರಿಶೀಲನೆ ಹಾಗೂ ಹಾನಗಲ್ ಗ್ರಾಮದಲ್ಲಿ ಬೂದು ನೀರು ನಿರ್ವಹಣೆಗಾಗಿ ಚರಂಡಿಯಲ್ಲಿ ಸಂಸ್ಕರಿಸುವ ವಿಧಾನ ನಿರ್ಮಾಣದ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಮೊಳಕಾಲ್ಮೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ವಿವಿಧ ಘಟಕಾಂಶಗಳ ಕುರಿತು ಸಭೆ ನಡೆಸಿ ಹಾಗೂ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಗುರಿ ನಿಗದಿಪಡಿಸುವಂತೆ ಸೂಚನೆ ನೀಡಿದರು.
Kshetra Samachara
20/01/2025 06:07 pm