ಧಾರವಾಡ: ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಸಾವನ್ನಪ್ಪಿದ ವ್ಯಕ್ತಿಯ ಹೆಸರು, ವಿಳಾಸ ತಿಳಿದು ಬಂದಿಲ್ಲ. ಹೋಗುತ್ತಿದ್ದ ಬಸ್ಸಿನ ಹಿಂಬದಿ ಚಕ್ರಕ್ಕೆ ಈ ವ್ಯಕ್ತಿ ತಾನಾಗೇ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕವಾಗಿ ಗೊತ್ತಾಗಿದೆ. ಆತ ಮಾನಸಿಕವಾಗಿ ಜರ್ಜರಿತನಾಗಿದ್ದ ಎಂದು ಹಲವರು ಹೇಳಿದ್ದಾರೆ.
ಸದ್ಯಕ್ಕೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಧಾರವಾಡ ಸಂಚಾರ ಠಾಣೆ ಇನ್‌ಸ್ಪೆಕ್ಟರ್ ಪಬ್ಲಿಕ್ ನೆಕ್ಸ್ಟ್‌ಗೆ ತಿಳಿಸಿದ್ದಾರೆ.
Kshetra Samachara
20/01/2025 06:32 pm