ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಬೆಳಗಾವಿ ಸಮಾವೇಶದಲ್ಲಿ ಭಾಗಿಯಾಗಿ - ಡಾ. ಅಂಶುಮಂತ್ ಗೌಡ

ಚಿಕ್ಕಮಗಳೂರು : ನಾಳೆ ಬೆಳಗಾವಿಯಲ್ಲಿ ಎಐಸಿಸಿ ನೇತೃತ್ವದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಐತಿಹಾಸಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ರಾಜ್ಯದ ಹಾಗೂ ರಾಷ್ಟ್ರದ ಎಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸುತ್ತಿದ್ದಾರೆ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಗೌಡ ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಿಂದ ಒಂದು ಸಾವಿರಕ್ಕೂ ಹೆಚ್ಚಿನ ಪಕ್ಷದ ಕಾರ್ಯಕರ್ತರು ಮುಖಂಡರು ಭಾಗವಹಿಸುತ್ತಿದ್ದಾರೆ ಎಂದರು. ಅಲ್ಲದೇ ಬಿಜೆಪಿಯವರು ನೈಜ ವಿಷಯಗಳನ್ನು ಮರೆಮಾಚಿ ಸಂವಿಧಾನದ ಆಶಯಗಳ ವಿರುದ್ಧವಾಗಿ ಹಾಗೂ ಬಾಬಾ ಸಾಹೇಬ್ ಹಾಗೂ ಮಹಾತ್ಮ ಗಾಂಧಿಯವರ ತತ್ವ ಸಿದ್ಧಾಂತಗಳಿಗೆ ವಿರುದ್ಧವಾಗಿ ಹೆಜ್ಜೆ ಇಡುತ್ತಿದ್ದು ಇವೆಲ್ಲದರ ಉಳಿವಿಗಾಗಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸುತ್ತದೆ ಎಂದರು.

Edited By : PublicNext Desk
PublicNext

PublicNext

20/01/2025 07:20 pm

Cinque Terre

31.24 K

Cinque Terre

0

ಸಂಬಂಧಿತ ಸುದ್ದಿ