", "articleSection": "Politics,Crime,Government", "image": { "@type": "ImageObject", "url": "https://prod.cdn.publicnext.com/s3fs-public/235762-1737425674-Untitled-design-(89).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಪಾಟ್ನಾ: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಹಾರ, ಉತ್ತರ ಪ್ರದೇಶದ ಜನರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋ...Read more" } ", "keywords": "Bihar, Uttar Pradesh, derogatory remarks, Kejriwal, defamation case, Delhi CM, AAP leader, election controversy, Indian politics, Bihar news, Uttar Pradesh news, Kejriwal controversy ¹ ² ³. ,,Politics,Crime,Government", "url": "https://publicnext.com/node" }
ಪಾಟ್ನಾ: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಹಾರ, ಉತ್ತರ ಪ್ರದೇಶದ ಜನರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಅವರ ವಿರುದ್ಧ ಪಾಟ್ನಾ ಸಿವಿಲ್ ನ್ಯಾಯಾಲಯದಲ್ಲಿ ಕೇಸ್ ದಾಖಲಾಗಿದೆ.
ಜನವರಿ 9ರಂದು ಕೇಜ್ರಿವಾಲ್ ನೀಡಿದ ಈ ಹೇಳಿಕೆಯು ಎರಡೂ ರಾಜ್ಯಗಳ ನಿವಾಸಿಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಭಾರತೀಯ ನ್ಯಾಯ್ ಸಂಹಿತಾ (ಬಿಎನ್ಎಸ್) ಸೆಕ್ಷನ್ 356ರ ಅಡಿಯಲ್ಲಿ ವಕೀಲ ಬಬ್ಲು ಕುಮಾರ್ ದೂರು ದಾಖಲಿಸಿದ್ದಾರೆ.
ಈ ಹೇಳಿಕೆಯು ಬಿಹಾರ ಮತ್ತು ಉತ್ತರ ಪ್ರದೇಶದ ಜನರ ಘನತೆ ಮತ್ತು ಭಾವನೆಗಳನ್ನು ಅವಮಾನಿಸಿದೆ ಎಂದು ಕುಮಾರ್ ಹೇಳಿದ್ದಾರೆ.
ಈ ಪ್ರಕರಣದ ವಿಚಾರಣೆ ಜನವರಿ 21 ರಂದು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯದಲ್ಲಿ ನಡೆಯಲಿದೆ. “ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯು ಬಿಹಾರ ಮತ್ತು ಉತ್ತರ ಪ್ರದೇಶದ ಜನರ ಭಾವನೆಗಳನ್ನು ನೋಯಿಸಿದ್ದಾರೆ. ಆದ್ದರಿಂದ ಈ ದೂರು ದಾಖಲಿಸಲಾಗಿದೆ” ಎಂದು ಕುಮಾರ್ ಹೇಳಿದರು.
PublicNext
21/01/2025 07:45 am