ಧಾರವಾಡ: ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ನಿನ್ನೆ ಸಂಜೆ ವ್ಯಕ್ತಿಯೊಬ್ಬ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ.
ಎಲ್ಲರೂ ಅದನ್ನು ಅಪಘಾತ ಎಂತಲೇ ಭಾವಿಸಿದ್ದರು. ಆದರೆ, ಮೃತ ವ್ಯಕ್ತಿ ಚಲಿಸುತ್ತಿದ್ದ ಬಸ್ಸಿನ ಹಿಂಬದಿ ಚಕ್ರದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಸಿಸಿಟಿವಿ ಕ್ಯಾಮೆರಾದಿಂದ ಗೊತ್ತಾಗಿದೆ.
ಸಾವನ್ನಪ್ಪಿದ ವ್ಯಕ್ತಿಯ ಹೆಸರು, ವಿಳಾಸ ಪತ್ತೆಯಾಗಿಲ್ಲ. ಆತ ಮಾನಸಿಕವಾಗಿ ಅಸ್ವಸ್ಥನಾಗಿದ್ದ. ಹೊಸ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನಂತೆ ನಿಂತಿದ್ದ ಈ ವ್ಯಕ್ತಿ ಬಸ್ ಬರುತ್ತಿದ್ದಂತೆ ಅದರ ಹಿಂಬದಿ ಚಕ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಧಾರವಾಡ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/01/2025 09:32 am