", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/418299-1737456782-KAMA.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಹಲವು ಕಾಮಗಾರಿಗಳಿಗ...Read more" } ", "keywords": ",Hubballi-Dharwad,Infrastructure,Government", "url": "https://publicnext.com/node" }
ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಹಲವು ಕಾಮಗಾರಿಗಳಿಗೆ ಅನುದಾನ ನೀಡುವ ಮೂಲಕ ಆ ಕಾಮಗಾರಿಗಳಿಗೆ ಮಾಜಿ ಶಾಸಕರಾದ ಅಮೃತ ದೇಸಾಯಿ ಹಾಗೂ ಸೀಮಾ ಮಸೂತಿ ಅವರಿಂದ ಭೂಮಿಪೂಜೆ ನೆರವೇರಿಸಿದ್ದಾರೆ.
ಪ್ರಹ್ಲಾದ ಜೋಶಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಧಾರವಾಡ ತಾಲೂಕಿನ ಗರಗ, ದುಬ್ಬನಮರಡಿ, ತಡಕೋಡ ಗ್ರಾಮಗಳಲ್ಲಿ ಹಲವಾರು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದೆ.
ಗರಗ ಗ್ರಾಮದ ಬಕ್ಕಯ್ಯನ ಮಠದ ಹತ್ತಿರ ಸಾಂಸ್ಕೃತಿಕ ಭವನ ನಿರ್ಮಾಣ, ದುಬ್ಬನಮರಡಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹತ್ತಿರ ಸಾಂಸ್ಕೃತಿಕ ಭವನ ನಿರ್ಮಾಣ, ದುಬ್ಬನಮರಡಿ ಗ್ರಾಮದ ಮರೆಮ್ಮನ ದೇವಸ್ಥಾನದ ಹತ್ತಿರ ಸಾಂಸ್ಕೃತಿಕ ಭವನ ನಿರ್ಮಾಣ, ತಡಕೋಡ ಗ್ರಾಮದ ವಿಠ್ಠಲ ದೇವಸ್ಥಾನದ ಹತ್ತಿರ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಮಾಜಿ ಶಾಸಕ ಅಮೃತ ದೇಸಾಯಿ ಅವರು ಭೂಮಿಪೂಜೆ ನೆರವೇರಿಸಿದರು. ನಂತರ ಗರಗ ಹಾಗೂ ತಡಕೋಡ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಡೆಸ್ಕ್ ಸಹ ವಿತರಣೆ ಮಾಡಲಾಯಿತು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/01/2025 04:23 pm