ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಇತ್ತೀಚೆಗಷ್ಟೇ ಒಪ್ಪಿಗೆ ಸೂಚಿಸಿತ್ತು.
ಇದೀಗ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸಂಬಂಧ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಸಹ ಹೊರಡಿಸಿದೆ.
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಬೇಕು ಎಂದು ಅನೇಕ ಹೋರಾಟಗಳು ದಶಕಗಳ ಕಾಲ ನಡೆದಿದ್ದವು. ಕೊನೆಗೆ ರಾಜ್ಯ ಸರ್ಕಾರ ಮೊನ್ನೆಯಷ್ಟೇ ಸಚಿವ ಸಂಪುಟ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆ ಮಾಡಿತ್ತು. ಇದೀಗ ಗೆಜೆಟ್ ನೋಟಿಫಿಕೇಶನ್ ಸಹ ಮಾಡಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/01/2025 09:03 pm