", "articleSection": "Politics,Government,Accident", "image": { "@type": "ImageObject", "url": "https://prod.cdn.publicnext.com/s3fs-public/235762-1737532644-Untitled-design-(100).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ...Read more" } ", "keywords": "Yellapur Accident, Sindhanur Road Accident, Karnataka Accident News, Fatal Road Crash, Compensation Announced, CM Relief Fund, Road Safety, Accident Update, Latest News, Regional News, Yellapur News, Sindhanur News, Karnataka News ¹. ,,Politics,Government,Accident", "url": "https://publicnext.com/node" }
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿದ್ದಾರೆ. ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು ಸಿಎಂ ಘೋಷಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಲ್ಲಾಪುರ ಮತ್ತು ಸಿಂಧನೂರಿನಲ್ಲಿ ಅಪಘಾತದಲ್ಲಿ 14 ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಟ್ವಿಟ್ ಮೂಲಕ ಜನತೆಯಲ್ಲಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.
PublicNext
22/01/2025 01:28 pm