", "articleSection": "Crime,Law and Order,Cinema", "image": { "@type": "ImageObject", "url": "https://prod.cdn.publicnext.com/s3fs-public/387839-1737544947-Untitled-design---2025-01-22T165144.741.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಂಬೈ: ಮಧ್ಯಪ್ರದೇಶದಲ್ಲಿ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅವರು ...Read more" } ", "keywords": "The Pataudi family, including Saif Ali Khan, is facing a potential loss of their ancestral properties in Bhopal, valued at approximately ₹15,000 crore. The Madhya Pradesh High Court has lifted a stay that had been in place since 2015, allowing the government to claim ownership of these properties under the Enemy Property Act, 1968 ¹. ,,Crime,Law-and-Order,Cinema", "url": "https://publicnext.com/node" } 'ಪಟೌಡಿ' ಕುಟುಂಬಕ್ಕೆ ಸಂಕಷ್ಟ : ಸೈಫ್‌ ಕುಟುಂಬಕ್ಕೆ ಸೇರಿದ 15,000 ಕೋಟಿ ಮೌಲ್ಯದ ಆಸ್ತಿ ಸರ್ಕಾರದ ಸ್ವಾಧೀನಕ್ಕೆ..?
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಪಟೌಡಿ' ಕುಟುಂಬಕ್ಕೆ ಸಂಕಷ್ಟ : ಸೈಫ್‌ ಕುಟುಂಬಕ್ಕೆ ಸೇರಿದ 15,000 ಕೋಟಿ ಮೌಲ್ಯದ ಆಸ್ತಿ ಸರ್ಕಾರದ ಸ್ವಾಧೀನಕ್ಕೆ..?

ಮುಂಬೈ: ಮಧ್ಯಪ್ರದೇಶದಲ್ಲಿ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅವರು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕೊಹೆಫಿಜಾ ಪ್ರದೇಶದಿಂದ ಭೋಪಾಲ್‌ನ ಚಿಕ್ಲೋಡ್‌ವರೆಗೆ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬದ ಪೂರ್ವಿಕರ ಆಸ್ತಿ ವಿಸ್ತರಿಸಿದೆ. ಇದನ್ನು ಶತ್ರು ಆಸ್ತಿ ಎಂದು 2014ರಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು. ಈ ಆಸ್ತಿ ಮೇಲೆ ಪಟೌಡಿ ಕುಟುಂಬದ ಉತ್ತರಾಧಿಕಾರಿಗೆ ಯಾವುದೇ ಹಕ್ಕು ಇರುವುದಿಲ್ಲ ಎಂದು ಸ್ಪಷ್ಟಪಡಿಸಿ ನೋಟಿಸ್ ಜಾರಿ ಮಾಡಲಾಗಿತ್ತು.

ಈ ನೋಟಿಸ್ ವಿರುದ್ಧ ಸೈಫ್ ಅಲಿ ಖಾನ್ ಪಟೌಡಿ ಕುಟುಂಬ ಸಲ್ಲಿಸಿದ್ದ ಅರ್ಜಿಯನ್ನು ಮಧ್ಯಪ್ರದೇಶದ ಹೈಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್‌ನ ನ್ಯಾಯಮೂರ್ತಿ ವಿವೇಕ್ ಅಗರ್ವಾಲ್ ಅವರ ಏಕಸದಸ್ಯ ಪೀಠವು 2024 ಡಿಸೆಂಬರ್ 13 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಅರ್ಜಿ ವಜಾಗೊಳಿಸಿ, ಜ.13ರವರೆಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು. ಆದರೆ ಸೈಫ್ ಅಲಿ ಖಾನ್ ಪಟೌಡಿ ಕುಟುಂಬ ಮೇಲ್ಮನವಿ ಸಲ್ಲಿಸಿಲ್ಲ ಎಂದು ತಿಳಿದು ಬಂದಿದೆ.

ತಡೆಯಾಜ್ಞೆ ತೆರವಾಗಿರುವುದರಿಂದ ಕೇಂದ್ರ ಸರ್ಕಾರ ‌ಆಸ್ತಿಗಳನ್ನು ತನ್ನ ವಶಕ್ಕೆ ತೆಗೆದುಕೊಳ್ಳಬಹುದು. ಈ ಮಧ್ಯೆ ಪಟೌಡಿ ಕುಟುಂಬ ಸುಪ್ರೀಂ ಕೋರ್ಟ್ ‌ಮೆಟ್ಟಿಲೇರಿ ರಿಲೀಫ್ ಪಡೆಯದಿದ್ದರೇ 15 ಸಾವಿರ ಕೋಟಿ ಆಸ್ತಿ ಕೇಂದ್ರ ಸರ್ಕಾರದ ವಶವಾಗುತ್ತದೆ. 'ಹೈಕೋರ್ಟ್ ಆದೇಶ ಸ್ಪಷ್ಟವಾದ ನಂತರವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಭೋಪಾಲ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಹೇಳಿದ್ದಾರೆ.

ಬಾಂದ್ರಾದ ತಮ್ಮ ನಿವಾಸದಲ್ಲಿ ದರೋಡೆಕೋರನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರು ಮಂಗಳವಾರ ಮಧ್ಯಾಹ್ನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆಯಾದರು.

Edited By : Abhishek Kamoji
PublicNext

PublicNext

22/01/2025 04:52 pm

Cinque Terre

41.69 K

Cinque Terre

1

ಸಂಬಂಧಿತ ಸುದ್ದಿ