", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/378325-1737551676-14.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "UmeshHosanagar" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹೊಸನಗರ : ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿ...Read more" } ", "keywords": "Hosanagar News, Rambhapuri Jagadgurus, Shiva Temple Inauguration, New Temple Building, Karnataka Temple News, Indian Temple Inauguration, Hindu Temple News, Spiritual Leaders, Karnataka News.,,News", "url": "https://publicnext.com/node" }
ಹೊಸನಗರ : ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಬುಧವಾರ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಸಮಯ ಸ್ನೇಹ ಮತ್ತು ಆರೋಗ್ಯ ಇವುಗಳಿಗೆ ಬೆಲೆ ಕಟ್ಟಲಾಗದು. ಬಡತನ ಮನುಷ್ಯನಿಗೆ ಇರಬೇಕೇ ಹೊರತು ಮನಸ್ಸಿಗೆ ಇರಬಾರದು. ಶ್ರೀಮಂತಿಕೆ ಮನಸ್ಸಿಗಿರಬೇಕೇ ಹೊರತು ಮನುಷ್ಯನಿಗಿರಬಾರದು.
ವೀರಶೈವ ಧರ್ಮ ಕಾಯಕ ತತ್ವಕ್ಕೆ ಬಹಳಷ್ಟು ಮಹತ್ವ ಕೊಟ್ಟಿದೆ. ಕಾಯಕವೇ ಕಳಾ ಚೈತನ್ಯವೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಮತ್ತು ಕಾಯಕವೇ ಕೈಲಾಸವೆಂದು ಬಸವಣ್ಣನವರು ಹೇಳಿದ್ದಾರೆ. ಗುಣಾತ್ಮಕ ಚಿಂತನೆಗಳು ಶ್ರೇಯಸ್ಸಿಗೆ ಮೂಲ. ಮಾನಸಿಕವಾಗಿ ದೈಹಿಕವಾಗಿ ಸದೃಢನಾಗಿರುವ ವ್ಯಕ್ತಿ ಯಾರನ್ನೂ ಎಂದೂ ಅವಲಂಬಿಸಬೇಕಾಗಿಲ್ಲ. ಎಲ್ಲಾ ಕಡೆ ತಲೆ ಎತ್ತಿ ನಿಲ್ಲುವವನು ದೊಡ್ಡ ಮನುಷ್ಯ ಅಲ್ಲ. ಎಲ್ಲಿ ತಲೆ ತಗ್ಗಿಸಿ ನಿಲ್ಲಬೇಕು ಅಂತಾ ಗೊತ್ತಿರುವವನೇ ನಿಜವಾಗಿ ದೊಡ್ಡ ಮನುಷ್ಯ. ಆಹಾರ ಅರಿವೆ ಆವಾಸಗಳನ್ನು ಬದಲಾಯಿಸಿದಾಕ್ಷಣ ನೆಮ್ಮದಿ ಸಿಗುತ್ತದೆ ಎನ್ನಲಾಗದು. ರಿಪ್ಪನ್‌ಪೇಟೆ ವೀರಶೈವ ಸಮಾಜ ಬಾಂಧವರು “ಶಿವಮಂದಿರ” ನಿರ್ಮಾಣ ಮಾಡುವುದರ ಮೂಲಕ ಗೌರವ ತಂದಿದ್ದಾರೆ.
ಈ ಸಭಾ ಭವನದ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಹಳಷ್ಟು ಸಹಕಾರ ಕೊಟ್ಟಿರುವುದು ಸಮಾಧಾನದ ಸಂಗತಿ. ಭವಿಷ್ಯತ್ತಿನಲ್ಲಿ ಇನ್ನಷ್ಟು ಜನ ಹಿತಾತ್ಮಕ ಅಭಿವೃದ್ಧಿ ಕಾರ್ಯಗಳು ನಡೆಯಲೆಂದು ಶ್ರೀ ರಂಭಾಪುರಿ ಜಗದ್ಗುರುಗಳು ಹಾರೈಸಿದರು.
ಹಲವಾರು ಗಣ್ಯರಿಗೆ ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆಯಿತ್ತು ಶುಭ ಹಾರೈಸಿದರು. ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಜರುಗಿತು.
PublicNext
22/01/2025 06:44 pm