ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ಕಾಡಾನೆ ದಾಳಿಯಿಂದ ಮೃತಪಟ್ಟ ಪುಟ್ಟಯ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಮಂಜು

ಆಲೂರು : ಕಾಡಾನೆ ದಾಳಿಯಿಂದ ಮೃತಪಟ್ಟ ವೃದ್ಧನ ಮೃತ ದೇಹದ ಮರಣೋತ್ತರ ಪರೀಕ್ಷೆ ಬಳಿಕ ಅಡಿಬೈಲು ಗ್ರಾಮಕ್ಕೆ ಶವ ತಂದ ವೇಳೆ ಶಾಸಕ ಸಿಮೆಂಟ್ ಮಂಜು ಸ್ಥಳದಲ್ಲಿದ್ದ ಅರಣ್ಯ ಇಲಾ ಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಮೃತದೇಹದ ಅಂತಿಮ ದರ್ಶನಕ್ಕೆ ಶಾಸಕರು ಆಗಮಿಸಿದ ವೇಳೆ ಅವರ ಎದುರೇ ಮಹಿಳೆಯರು ಮತ್ತು ಗ್ರಾಮಸ್ಥರು ಅಳಲು ತೋಡಿಕೊಂಡರು.

ನಾವು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುತ್ತೇವೆ ಈ ವೇಳೆ ಕಾಡಾನೆ ದಾಳಿ ಮಾಡಿದರೆ ಹೊಣೆ ಯಾರು? ಅರಣ್ಯ ಇಲಾಖೆಯವರು ನಮಗೆ ಕಾಡಾನೆಗಳ ಚಲನವಲನದ ಬಗ್ಗೆ ಮಾಹಿತಿ ನೀಡುತ್ತಿಲ್ಲ ಎಂದು ಆಗ್ರಹಿಸಿದರು. ಪ್ರತಿನಿತ್ಯ ಜೀವಭಯದಲ್ಲೇ ಬದುಕಬೇಕಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

Edited By : Shivu K
PublicNext

PublicNext

22/01/2025 10:45 pm

Cinque Terre

12.61 K

Cinque Terre

0

ಸಂಬಂಧಿತ ಸುದ್ದಿ