ಕುಶಾಲನಗರ: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಸಂಜೆ ಅನಿಲ ಸೋರಿಕೆ ಉಂಟಾದ ಪರಿಣಾಮ ಸ್ಥಳೀಯರಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿದೆ
ಎಂದು ಆರೋಪಿಸಿ ಗ್ರಾಮಸ್ಥರು ಬಂಕ್‌ಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಸಂಜೆ ಘಟಕದಿಂದ ಅನಿಲ ಸೋರಿಕೆಯಿಂದ ದುವಾರ್ಸನೆ ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿ ಹಲವು ಮಂದಿಗೆ ಉಸಿರಾಟ ಸಮಸ್ಯೆ, ಮಕ್ಕಳಲ್ಲಿ ವಾಂತಿ, ವಾಕರಿಗೆ ಹಾಗೂ ಅಸ್ವಸ್ಥತೆ ಕಾಡಿದೆ. ಇದರಿಂದ ಆತಂಕಗೊಂಡ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು, ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಅವರೊಂದಿಗೆ ಬಂಕ್‌ಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾಸ್ ಘಟಕದವರ ನಿರ್ಲಕ್ಷ್ಯತನದಿಂದ ಆತಂಕದ ಪರಿಸ್ಥಿತಿ ಸೃಷ್ಠಿಯಾಗಿದೆ. ಜನವಸತಿ ಪ್ರದೇಶದಲ್ಲಿ ಸ್ಥಾಪಿಸಲಾಗುತ್ತಿರುವ ಈ ಘಟಕದಿಂದ ಮುಂದಿನ ದಿನಗಳಲ್ಲಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದೆ. ಈ ನಿಟ್ಟಿನಲ್ಲಿ ನಮ್ಮ ಜೀವಕ್ಕೆ ಜವಾಬ್ದಾರಿ ವಹಿಸಿಕೊಳ್ಳುವವರೆಗೆ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದರು.
ಇದೇ ಸಂದರ್ಭ ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು..
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹಲವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. ಈ ನಿಟ್ಟಿನಲ್ಲಿ ಘಟಕದ ಸಿಬ್ಬಂದಿ ವಿಚಾರಿಸಿದಾಗ ಲಿಕೇಜ್ ಟೆಸ್ಟಿಂಗ್ ಸಂದರ್ಭ ಈ ರೀತಿಯಾಗಿದೆ. ಇದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳೋದಾಗಿ ತಿಳಿಸಿದ್ದಾರೆ.
Kshetra Samachara
23/01/2025 11:20 am