ಧಾರವಾಡ: ವಿಜಯ ಕರ್ನಾಟಕ ದಿನಪತ್ರಿಕೆ ಸುದ್ದಿ ನೀಡುವುದರ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಮಾಡ್ತಾ ಬಂದಿದೆ. ಅದೇ ರೀತಿ ಡ್ರಗ್ಸ್ ಮುಕ್ತ ಕರ್ನಾಟಕ ಎಂದು ಸಂಕಲ್ಪ ಹೊತ್ತು ಇಂದು ಧಾರವಾಡದ ಜೆಎಸ್ಎಸ್ ಮಹಾವಿದ್ಯಾಲಯದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಾಜಿ ಸಿಎಂ ಸಂಸದ ಬಸವರಾಜ ಬೊಮ್ಮಾಯಿ, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಮನೋವೈದ್ಯ ಪವನ ಜೋಶಿ, ಜೆಎಸ್ಎಸ್ ಸಂಸ್ಥೆಯ ಕಾರ್ಯದರ್ಶಿ ಅಜಿತ್ ಪ್ರಸಾದ್ ಸೇರಿದಂತೆ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು.
ಈ ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಾದಕ ವಸ್ತುಗಳ ಸೇವನೆಯಿಂದ ಎಷ್ಟೆಲ್ಲ ಪರಿಣಾಮ ಬೀರುತ್ತದೆಂದು ಗಣ್ಯರು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು. ಈ ಸಂದರ್ಭದಲ್ಲಿ ಕ್ಲಾಸಿಕ್ ಸಮೂಹ ಸಂಸ್ಥೆಯ ಚೇರ್ಮನ್ ಲಕ್ಷ್ಮಣ ಉಪ್ಪಾರ, ಉಜ್ವಲ ಡೆವಲಪರ್ಸ್ ಆ್ಯಂಡ್ ಬಿಲ್ಡರ್ ಮಾಲೀಕರಾದ ದಾದಾಪೀರ ಬಳ್ಳಾರಿ, ಹಂಚಿನಮನೆ ಕಾಲೇಜಿನ ಪ್ರಾಚಾರ್ಯರು, ವಿಜಯ ಕರ್ನಾಟಕ ಸಂಪಾದಕರಾದ ಬಂಡು ಕುಲಕರ್ಣಿ, ಹಿರಿಯ ವರದಿಗಾರರಾದ ವಿಜಯಕುಮಾರ್ ಹೂಗಾರ ಸೇರಿದಂತೆ ವಿಕೆ ಸಿಬ್ಬಂದಿ ಮತ್ತು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
23/01/2025 06:14 pm