ಅಮರಾವತಿ: ಆಂಧ್ರಪ್ರದೇಶದ ಅನಂತಪುರದ ನಾರಾಯಣ ಕಾಲೇಜಿನ ಪ್ರಥಮ ವರ್ಷದ ಇಂಟರ್-ಕಾಲೇಜು ವಿದ್ಯಾರ್ಥಿಯೊಬ್ಬ ಗುರುವಾರ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತರಗತಿಯ ಸಮಯದಲ್ಲಿ ವಿದ್ಯಾರ್ಥಿ ಚರಣ್ ಕೊಠಡಿಯಿಂದ ಹೊರಬಂದು, ಯಾವುದೇ ಭಯವಿಲ್ಲದೆ ಕಟ್ಟೆಯ ಮೇಲೆ ನಿಂತು ಕೆಳಗೆ ಹಾರಿದ್ದಾನೆ. ಇದನ್ನು ನೋಡಿದ ತಕ್ಷಣವೇ ಶಿಕ್ಷಕರು ಮತ್ತು ಸಹಪಾಠಿಗಳು ಆಘಾತಕ್ಕೊಳಗಾಗಿ ಓಡಿ ಬಂದು ನೋಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಘಟನೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಂಭವಿಸಿದೆ. ಆದರೆ ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಲಭ್ಯವಾಗಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
23/01/2025 06:48 pm