ಹಾವೇರಿ: ಗೋವಿಂದ ಕಾರಜೋಳ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಮಾಡುತ್ತೇನೆ ಎಂದು ಹೇಳಿದ್ದಷ್ಟೇ ನಯಾಪೈಸೆ ಬಿಡುಗಡೆ ಮಾಡಿಲ್ಲಾ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಂಸದ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥಮಾಡಿಕೊಳ್ಳಬೇಕು ಭದ್ರಾ ಮೇಲ್ದಂಡೆ ಯೋಜನೆ ಆರಂಭವಾಗಿದ್ದೆ 2007-08 ರಲ್ಲಿ ಎಂದು ಕಾರಜೋಳ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಸರ್ಕಾರ ಆ ಯೋಜನೆಗೆ ಹಣಾನೇ ನೀಡಿಲ್ಲಾ. ಆ ಯೋಜನೆಗೆ ಹಣ ನೀಡಿದ್ದು ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗೋವಿಂದ ಕಾರಜೋಳ ತಿಳಿಸಿದರು.
ಕೇಂದ್ರ ಸರ್ಕಾರದಿಂದ 5300 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ ಕೇಳಿದ ಮಾಹಿತಿಯನ್ನ ರಾಜ್ಯ ಸರ್ಕಾರ ನೀಡದ ಕಾರಣ ದುಡ್ಡು ಬಿಡುಗಡೆಯಾಗಿಲ್ಲಾ ಎಂದು ಗೋವಿಂದ ಕಾರಜೋಳ ಆರೋಪಿಸಿದರು. ಮೊದಲು ಇವರು ಕೇಂದ್ರ ಸರ್ಕಾರಕ್ಕೆ ಮಾಹಿತಿ ಕಳಿಸಲಿ ಎಂದು ಗೋವಿಂದ ಕಾರಜೋಳ ತಿಳಿಸಿದರು.
Kshetra Samachara
23/01/2025 09:11 pm