ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್ ಸಮೀಪ ಸರಣಿ ಅಪಘಾತದಲ್ಲಿ ಸಂಭವಿಸಿದ್ದು ಘಟನೆಯಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ಸಕಲೇಶಪುರ ರಸ್ತೆಯಿಂದ ಮೂಡಿಗೆರೆ ಕಡೆಗೆ ಬರುತ್ತಿದ್ದ ಬೈಕ್‌ಗೆ ವೇಗವಾಗಿ ಬಂದ ಓಮಿನಿ ಕಾರ್ ಹಿಂಬದಿಯಿಂದ ಡಿಕ್ಕಿ ಹೊಡೆದು ನಂತರ ಲಾರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ, ಮಹಿಳೆಗೆ ಗಾಯಗಳಾಗಿವೆ ಅಲ್ಲದೇ ಓಮಿನಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಗೂ ಗಾಯವಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
24/01/2025 09:18 am