ಪಡುಬಿದ್ರಿ: ಹಣದ ವ್ಯವಹಾರಕ್ಕೆ ಸಂಬಧಿಸಿದಂತೆ ಯಕ್ಷಗಾನ ಕಲಾವಿದರೊಬ್ಬರನ್ನು ಮನೆಯಲ್ಲಿ ಬಲವಂತವಾಗಿ ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ಪಡುಬಿದ್ರಿಯಲ್ಲಿ ಸಂಭವಿಸಿದೆ. ಸದ್ಯ ಕಲಾವಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಸಿಹಿತ್ಲು ಶ್ರೀಭಗವತಿ ಯಕ್ಷಗಾನ ಮೇಳದ ಕಲಾವಿದರಾಗಿರುವ ಇವರು, ಸ್ನೇಹಿತ ,ಕಲಾವಿದ ಸಚಿನ್‌ನಿಂದ ಬಡ್ಡಿಗೆ ಸಾಲ ಪಡೆದುಕೊಂಡಿದ್ದರು. .
ಆದರೆ ನಿಗದಿತ ಸಮಯದೊಳಗೆ ಸಾಲವನ್ನು ಕಟ್ಟುತ್ತಿಲ್ಲ ಎಂಬ ಕಾರಣದಿಂದ ಸಚಿನ್, ಆತನ ಉದ್ಯಾವರದಲ್ಲಿರುವ ಮನೆಗೆ ಕರೆದುಕೊಂಡು ಹೋಗಿ, ಅಲ್ಲಿ ಮನೆಯಲ್ಲಿ ಬಲವಂತವಾಗಿ ಕೂಡಿ ಹಾಕಿದ್ದಾನೆ. ಅಲ್ಲಿ ಸಚಿನ್, ಆತನ ತಂದೆ ಕುಶಾಲ್ ಹಾಗೂ ಇನ್ನೊರ್ವ ಅಪರಿಚಿತ ವ್ಯಕ್ತಿ ಬೆತ್ತದಿಂದ ಬೆನ್ನಿಗೆ, ತಲೆಗೆ, ಕಾಲಿಗೆ ಹೊಡೆದಿದ್ದಾರೆ.
ಬಳಿಕ ಖಾಲಿ ಬಾಂಡ್ ಪೇಪರ್‌ಗೆ ಬಲವಂತವಾಗಿ ಸಹಿ ಪಡೆದುಕೊಂಡಿದ್ದಾರೆ ಎಂದು ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ ನಿತಿನ್ ಆಚಾರ್ಯ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
PublicNext
24/01/2025 09:38 am