", "articleSection": "Politics,Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/387839-1737694575-Untitled-design---2024-11-05T230006.200.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಮಂಜೂರಾತಿ ಪ್ರಕರಣದಲ್ಲಿ ಲೋಕಾಯುಕ್ತರು ಕ್ಲೀನ್ ಚಿಟ್ ನೀಡಿದ್ದಾರೆ ಎಂದು ವರದಿಯಾಗಿದ...Read more" } ", "keywords": "Mudha Hagarana case and Siddaramaiah, ,politics, scam,court,,Politics,Crime,Law-and-Order", "url": "https://publicnext.com/node" }
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಮಂಜೂರಾತಿ ಪ್ರಕರಣದಲ್ಲಿ ಲೋಕಾಯುಕ್ತರು ಕ್ಲೀನ್ ಚಿಟ್ ನೀಡಿದ್ದಾರೆ ಎಂದು ವರದಿಯಾಗಿದೆ. ಲೋಕಾಯುಕ್ತ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ ಅಥವಾ ಅವರ ಪತ್ನಿ ಪಾರ್ವತಿ ಅವರು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮುಡಾ ಆಯುಕ್ತರು ಮತ್ತು ಕಂದಾಯ ಅಧಿಕಾರಿಗಳು ನಿಯಮಗಳನ್ನು ನಿರ್ಲಕ್ಷಿಸಿರುವುದು ಕಂಡುಬಂದಿದೆ ಎಂದು ವರದಿಯಲ್ಲಿ ತಿಳಿದು ಬಂದಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಮುಂದಿನ ಕ್ರಮದ ಕುರಿತು ಕಾನೂನು ಸಲಹೆ ಕೇಳುವಂತೆ ಲೋಕಾಯುಕ್ತರು ಉಲ್ಲೇಖಿಸಿದ್ದಾರೆ.
ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಹಗಿದೆ. ಲೋಕಾಯುಕ್ತ ಎಸ್‌ಪಿ ಉದೇಶ್ ನೇತೃತ್ವದಲ್ಲಿ ಮುಡಾ ಹಗರಣದ ತನಿಖಾ ವರದಿ ಅಂತಿಮಗೊಂಡಿದ್ದು, ಸೋಮವಾರ (ಜನವರಿ 27) ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.
ಸರ್ವೆ ನಂ.464ರ ಅಡಿಯಲ್ಲಿ 3.16 ಎಕರೆ ಭೂಪರಿವರ್ತನೆ ಪ್ರಕ್ರಿಯೆಯ ಎಲ್ಲ ಹಂತಗಳನ್ನು ವರದಿಯು ಕೂಲಂಕುಷವಾಗಿ ಪರಿಶೀಲಿಸಿದ್ದು, ಇದರ ಪರಿಣಾಮವಾಗಿ 14 ನಿವೇಶನಗಳನ್ನು ಮುಡಾ ಸ್ವಾಧೀನಪಡಿಸಿಕೊಂಡಿದೆ. ಅಧಿಕಾರಿಗಳ ವ್ಯತ್ಯಯಗಳನ್ನು ಗುರುತಿಸಲಾಗಿದ್ದರೂ, ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಭಾಗಿಯಾಗಿಲ್ಲ ಎಂದು ಲೋಕಾಯುಕ್ತರು ತೀರ್ಮಾನಿಸಿದ್ದಾರೆ.
ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ (ಜನವರಿ 27) ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್‌ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ. ಅದಕ್ಕೂ ಮುನ್ನ ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿಯನ್ನು ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ
PublicNext
24/01/2025 10:26 am