", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/29545520250124123041filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShankarNavalagunda" }, "editor": { "@type": "Person", "name": "9740080658" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವಲಗುಂದ: ಪೊಲೀಸ್ ಇಲಾಖೆ ಎಂದಾಕ್ಷಣ ಜನರು ಭಯ ಪಡುವ ಅಗತ್ಯವಿಲ್ಲ ಇಲಾಖೆ ಜನಸ್ನೇಹಿಯಾಗಿದ್ದು, ತಪ್ಪು ಮಾಡಿದವರು ಮಾತ್ರ ಭಯ ಪಡಬೇಕು ಎಂದು ಶಾಸಕ ...Read more" } ", "keywords": "Node,Hubballi-Dharwad,Public-News", "url": "https://publicnext.com/node" }
ನವಲಗುಂದ: ಪೊಲೀಸ್ ಇಲಾಖೆ ಎಂದಾಕ್ಷಣ ಜನರು ಭಯ ಪಡುವ ಅಗತ್ಯವಿಲ್ಲ ಇಲಾಖೆ ಜನಸ್ನೇಹಿಯಾಗಿದ್ದು, ತಪ್ಪು ಮಾಡಿದವರು ಮಾತ್ರ ಭಯ ಪಡಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ತಾಲೂಕಿನ ಮೊರಬ ಗ್ರಾಮದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗ ನವಲಗುಂದದಿಂದ ₹10 ಲಕ್ಷ ವೆಚ್ಚದಲ್ಲಿ ಗ್ರಾಮೀಣ ಹೊರ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರ ಶ್ರಮ ಮುಖ್ಯ, ಹಗಲಿರುಳು ಲೆಕ್ಕಿಸದೆ ಕರ್ತವ್ಯ ನಿರ್ವಹಿಸುವ ಪೊಲೀಸ್ ಇಲಾಖೆಯ ಸಿಬ್ಬಂದಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ ಎಂದರು.
ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಮಾತನಾಡಿ, ಪೊಲೀಸ್ ಠಾಣೆ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಲಾಗಿದ್ದು, ಗ್ರಾಮಕ್ಕೆ ಹೊಂದಿಕೊಂಡಿರುವ ಎರಡು ಎಕರೆ ಜಮೀನು ನೀಡಿದರೆ ಇಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಾದಕ ವಸ್ತುಗಳ ಸೇವನೆ, ಸರಬರಾಜು, ಮಾರಾಟದ ಕುರಿತು ಮಾಹಿತಿ ಸಿಕ್ಕರೆ ಕೂಡಲೆ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
Kshetra Samachara
24/01/2025 12:30 pm