", "articleSection": "Politics,Law and Order,Government", "image": { "@type": "ImageObject", "url": "https://prod.cdn.publicnext.com/s3fs-public/52563-1737703047-67280c9e-b127-46bc-88cf-1c76472407dc.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯಿದೆಯ ಸಿಂಧುತ್ವವನ್ನು ಎತ್ತಿ ಹಿಡಿಯುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ರ...Read more" } ", "keywords": "The conflict between the state government and the Mysore royal family has led to a crisis, prompting the Chief Minister to call an emergency cabinet meeting. This development has sparked a lot of interest and debate, with many wondering what the outcome will be. The Mysore royal family has a rich history, dating back to the British era, and has played a significant role in the state's development. The current situation has raised questions about the family's rights and privileges, as well as the state government's authority. As the situation unfolds, it will be interesting to see how the conflict is resolved and what implications it may have for the state and its people,,Politics,Law-and-Order,Government", "url": "https://publicnext.com/node" } ರಾಜ್ಯ ಸರ್ಕಾರ-ಮೈಸೂರು ರಾಜವಂಶ ನಡುವೆ ಸಂಘರ್ಷ : ತುರ್ತು ಸಂಪುಟ ಸಭೆ ಕರೆದ ಸಿಎಂ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಸರ್ಕಾರ-ಮೈಸೂರು ರಾಜವಂಶ ನಡುವೆ ಸಂಘರ್ಷ : ತುರ್ತು ಸಂಪುಟ ಸಭೆ ಕರೆದ ಸಿಎಂ

ಬೆಂಗಳೂರು : ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯಿದೆಯ ಸಿಂಧುತ್ವವನ್ನು ಎತ್ತಿ ಹಿಡಿಯುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿ ಪರಿಗಣಿಸುವಂತೆ ಕೋರಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಆ ಮೂಲಕ ಬೆಂಗಳೂರು ಅರಮನೆ ಜಾಗದ ಒಡೆತನ ವಿಚಾರವಾಗಿ ಮೈಸೂರು ರಾಜವಂಶದೊಂದಿಗೆ ರಾಜ್ಯ ಸರಕಾರದ ಮತ್ತೊಂದು ಸುತ್ತಿನ ಸಂಘರ್ಷ ನಡೆದಿದೆ.

ಹೌದು ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ವಿಚಾರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿನ ಸಂಪುಟ ಸಭಾ ಮಂದಿರದಲ್ಲಿ ಸಂಪುಟ ಸಭೆ ನಡೆಯಲಿದ್ದು, ಸಭೆಯು ತೀವ್ರ ಕುತೂಹಲ ಮೂಡಿಸಿದೆ.

ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ರಾಜಮನೆತನ ಮತ್ತು ರಾಜ್ಯ ಸರಕಾರದ ನಡುವಿನ ತಿಕ್ಕಾಟ ನಡೆಯುತ್ತಿದೆ. ಈ ವಿಚಾರ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಬೇಕಾದ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕಿದೆ.

ಇಂದು ನಡೆಯುವ ಸಂಪುಟ ಸಭೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಸ್ತೆ ಅಗಲೀಕರಣ ವಿಚಾರದ ಹಿನ್ನೆಲೆಯಲ್ಲಿ ಇಡೀ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಸರ್ಕಾರ ನಿರ್ಧಾರ ಕೈಗೊಳ್ಳಲಿದ್ದು, ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

Edited By : Nirmala Aralikatti
PublicNext

PublicNext

24/01/2025 12:47 pm

Cinque Terre

31.76 K

Cinque Terre

2

ಸಂಬಂಧಿತ ಸುದ್ದಿ