", "articleSection": "Crime,Law and Order,Cinema", "image": { "@type": "ImageObject", "url": "https://prod.cdn.publicnext.com/s3fs-public/387839-1737704661-Untitled-design---2025-01-24T131414.689.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ...Read more" } ", "keywords": "New Delhi, Supreme Court, Darshan, Notice to Accused, Contempt of Court, Karnataka High Court, Judicial Proceedings, Legal News, Indian Judiciary.,,Crime,Law-and-Order,Cinema", "url": "https://publicnext.com/node" }
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಆರೋಪಿಗಳು ಅಮಾನವೀಯ ನಡೆದುಕೊಂಡಿದ್ದಾರೆ ಎಂದು ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ಜಾರಿಮಾಡಿದೆ.
ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ರೇಣುಕಾ ಸ್ವಾಮಿ ಕೊಲೆ ಕೇಸ್ನ ಏಳು ಆರೋಪಿಗಳಿಗೆ ಜಾಮೀನು ನೀಡಿತ್ತು. ಇದನ್ನು ಬೆಂಗಳೂರು ಪೊಲೀಸರು ಸರ್ಕಾರದ ಒಪ್ಪಿಗೆ ಪಡೆದು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದರು.
ಇದರ ವಿಚಾರಣೆ ವೇಳೆ ಸರ್ಕಾರಿ ಪರ ವಕೀಲರು ತಮ್ಮ ವಾದ ಮಂಡಿಸಿದ್ದಾರೆ. ‘ಆರೋಪಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಿ’ ಎಂದು ಮನವಿ ಮಾಡಿದ್ದಾರೆ.
7 ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ‘ಉಳಿದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೆ ಇದು ಅನ್ವಯಿಸುವುದಿಲ್ಲ. ಹೈಕೋರ್ಟ್ ಫೈಂಡಿಂಗ್ಸ್ ಅನ್ವಯ ಆಗುವುದಿಲ್ಲ’ ಎಂದು ಸುಪ್ರೀಕೋರ್ಟ್ ಅಭಿಪ್ರಾಯಪಟ್ಟಿದೆ. ಸದ್ಯ ವಿಚಾರಣೆಯನ್ನು ಕೋರ್ಟ್ ಮುಂದಕ್ಕೆ ಹಾಕಿದೆ.
PublicNext
24/01/2025 01:15 pm