ಧಾರವಾಡ : ಮಾಜಿ ಸಚಿವರಾದ ಜನಾರ್ಧನ ರೆಡ್ಡಿ ಹಾಗೂ ಬಿ.ಶ್ರೀರಾಮುಲು ಅವರ ನಡುವೆ ಆಗಿರುವ ಬಿರುಕಿನ ವಿಚಾರ ಟಿವಿ ಮಾಧ್ಯಮದ ಮುಂದೆ ಮಾತನಾಡುವಂತದ್ದಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಏನೇ ನಡೆದಿದ್ದರೂ ಅದು ಸರಿಯಾಗಿ ನಡೆಯುತ್ತಿಲ್ಲ. ಆ ಎಲ್ಲ ವಿಚಾರವನ್ನು ಟಿವಿ ಎದುರು ಮಾತನಾಡುವಂತದ್ದಲ್ಲ. ಪಕ್ಷದಲ್ಲಿ ಎಲ್ಲವೂ ಸರಿ ಆಗಬೇಕಿದೆ. ಹೈಕಮಾಂಡ್ ಇದನ್ನು ಗಂಭೀರವಾಗಿ ತೆಗೆದುಕೊಳ್ಳಲಿದೆ. ಅವರು ದೆಹಲಿ ಚುನಾವಣೆಯಲ್ಲಿ ಬ್ಯುಸಿ ಆಗಿದ್ದಾರೆ. ಹೈಕಮಾಂಡ್ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ಇದೆ ಎಂದರು.
ಜೆ.ಪಿ.ನಡ್ಡಾ ಅವರು ಈಗಾಗಲೇ ಶ್ರೀರಾಮುಲು ಜೊತೆ ಮಾತನಾಡಿದ್ದಾರೆ. ದೇಶದಲ್ಲಿ ಬೇರೆ ಬೇರೆ ವಿಷಯ ನಡೆದಿವೆ. ಇದರ ಮಧ್ಯೆಯೂ ರಾಜ್ಯದ ಬಿಜೆಪಿಯಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆ ಬಗ್ಗೆ ಹೈಕಮಾಂಡ್‌ಗೆ ಗೊತ್ತಿದೆ. ಅವರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
24/01/2025 02:51 pm